ಬಳ್ಳಾರಿ,ಫೆ.03 : ತಾಲ್ಲೂಕಿನ 02 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಫೆ.05 ರಿಂದ 12 ರ ವರೆಗೆ ಗಣಕಯಂತ್ರ ಶಿಕ್ಷಣ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಒಳಗಿನ ಆವರಣವನ್ನು ಸಿ.ಆರ್.ಪಿ.ಸಿ. ಕಲಂ 144ರ ಮೇರೆಗೆ ನಿಭರ್ಂಧಿತ ಪ್ರದೇಶವೆಂದು ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿμÉೀಧಿಸಿದೆ ಹಾಗೂ ಪರೀಕ್ಷಾ ದಿನಗಳಂದು ಬೆಳ್ಳಿಗ್ಗೆ 09 ಗಂಟೆಯಿಂದ ಸಂಜೆ 05.30 ಗಂಟೆಯವರೆಗೆ ಆಯಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಸೆಂಟರ್ಗಳನ್ನು ಮುಚ್ಚುವಂತೆಯೂ ಮತ್ತು ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.