ಬಳ್ಳಾರಿ,ಜ.26 : ನಗರದ ಡಾ.ರಾಜ್ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪ್ರಶಾಂತ್ಕುಮಾರ್ ಮಿಶ್ರಾ ಅವರು 75ನೇ ಗಣರಾಜ್ಯೋತ್ಸವ ದಿನ ಅಂಗವಾಗಿ ಧ್ವಜಾರೋಹಣಾ ನೆರವೇರಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಗಣರಾಜ್ಯೋತ್ಸವದ ದಿನಾಚರಣೆಯ ಶುಭಾಷಯ ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಸಹಾಯಕ ಆಯುಕ್ತರಾದ ಹೇಮಂತ್ಕುಮಾರ್, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷ ಅಧಿಕಾರಿ ಪಿ.ಎಸ್.ಮಂಜುನಾಥ, ತಹಶೀಲ್ದಾರ ಗುರುರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಇತರರು ಇದ್ದರು.
ನೂತನ ಜಿಲ್ಲಾಡಳಿತ ಭವನದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ
