ತಮಿಳುನಾಡು: ತಮಿಳುನಾಡಿನ ವಿರುದುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸ್ಥಳೀಯರ ಪ್ರಕಾರ, ಸ್ಫೋಟದ ತೀವ್ರತೆ ಎಷ್ಟು ದೊಡ್ಡದಾಗಿದೆ ಎಂದರೆ ಪಟಾಕಿ ಕಾರ್ಖಾನೆ ಬಳಿಯ ನಾಲ್ಕು ಕಟ್ಟಡಗಳು ಸ್ಫೋಟದಿಂದ ಹಾನಿಗೊಳಗಾಗಿವೆ.
ಪಟಾಕಿ ಕಾರ್ಖಾನೆಯು ವಿಜಯ್ ಎಂಬುವವರಿಗೆ ಸೇರಿದ್ದಾಗಿದೆ, ಇದು ನಗರದ ವೆಂಬಕೊಟ್ಟೈ ಪ್ರದೇಶದಲ್ಲಿದೆ. ಘಟನೆಯ ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡವು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಮೃತರಲ್ಲಿ ಮಹಿಳೆಯರೂ ಸೇರಿದ್ದಾರೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೆಂಬಕೊಟ್ಟೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮತ್ತಿಬ್ಬರು ಕೊನೆಯುಸಿರೆಳೆದಿದ್ದಾರೆ.