ಸುವರ್ಣವಾಹಿನಿ ಸುದ್ದಿ
ಬಳ್ಳಾರಿ,ಜ,೧೮: ಕನ್ನಡ ಸಾಹಿತ್ಯದ ಸವಿ ರುಚಿಯನ್ನು ಯುವಕರಲ್ಲಿ ಒಡಮೂಡಿಸುವ ಮೂಲಕ ಅವರಲ್ಲಿ ಕನ್ನಡ ಪ್ರಜ್ಞೆಯನ್ನು ಅರಳಿಸುವ ಕಾರ್ಯ ಮಾಡಬೇಕೆಂದು ವಿಶ್ರಾಂತ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಎಂ. ಮಲ್ಲಿಕಾರ್ಜುನಯ್ಯ ಕರೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ಜಿಲ್ಲಾ ಘಟಕ ವಾಸವಿ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಲ್ಲಿಕಾರ್ಜುನಯ್ಯ ಮಾತನಾಡಿದರು.
ಬಾಲ್ಯದಲ್ಲಿ ಮಕ್ಕಳಿಗೆ ಅವರವರ ಮಾತೃ ಭಾಷೆಯಲ್ಲಿ ಶಿಕ್ಷಣ ದೊರೆತಾಗ ಮಾತ್ರ ಮಕ್ಕಳು ಸೃಜನಶೀಲ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವೆಂದು ಕಲಿಕೆ ಟ್ರಸ್ಟ್ ಶಾಲಾಪೂರ್ವ ಶಿಕ್ಷಣ ಬಲವರ್ಧನೆ ಕಾರ್ಯಕ್ರಮ ಜಿಲ್ಲಾ ವ್ಯವಸ್ಥಾಪಕರಾದ ಕೆ. ಜಗನ್ನಾಥ ತಿಳಿಸಿದರು. ವಾಸವಿ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ ಪೋಲಾ ಬಸವರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವಾಸವಿ ವಿದ್ಯಾಲಯದ ಮುಖ್ಯಗುರು ಯು. ವೀರೇಶ್ ಮಾತನಾಡಿ ಪರಿಷತ್ತಿನ ಕಾರ್ಯಕ್ರಮಗಳಿಗೆ ತಮ್ಮ ಶಾಲೆಯಿಂದ ಮುಂದಿನ ದಿನಗಳಲ್ಲಿಯೂ ಸಹಕಾರ ನೀಡುವುದಾಗಿ ತಿಳಿಸಿದರು.
ನೇಗಿಲ ಒಡೆಯ ಚಲನಚಿತ್ರ ನಿರ್ದೇಶಕರಾದ ನಾಗಹಳ್ಳಿ ಕೃಷ್ಣ ಮೋಹನ್ ಅವರನ್ನು ಸನ್ಮಾನಿಸಲಾಯಿತು. ಕಸಾಪ ಗೌರವ ಕೋಶಾಧ್ಯಕ್ಷ ಬಸವರಾಜ್ ಗದುಗಿನ ಪ್ರಾಸ್ತಾವಿಕವಾಗಿ ಮಾತನಾಡಿದರು.ವಾಸವಿ ವಿದ್ಯಾಲಯದ ಮಕ್ಕಳಿಗಾಗಿ ಪರಿಷತ್ತಿನಿಂದ ಪ್ರಬಂಧ ಸ್ಪರ್ಧೆ ಮತ್ತು ಭಾವಗೀತೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಶಾಲೆಯ ಗುರುಗಳಾದ ಶ್ರೀಮತಿ ಬಸವರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ರೂಪಾ ಸ್ವಾಗತಿಸಿದರು. ಶ್ರೀಮತಿ ಶಶಿಕಲಾ ವಂದಿಸಿದರು. ಬಿಸಲಹಳ್ಳಿ, ಹಿಂದುಪುರ ಸರ್ ಉಪಸ್ಥಿತರಿದ್ದರು.
ನೇಗಿಲ ಒಡೆಯ ಚಲನಚಿತ್ರ ನಿರ್ದೇಶಕರಾದ ನಾಗಹಳ್ಳಿ ಕೃಷ್ಣ ಮೋಹನ್ ಅವರನ್ನು ಸನ್ಮಾನಿಸಲಾಯಿತು.
ಕಸಾಪ ಗೌರವ ಕೋಶಾಧ್ಯಕ್ಷ ಬಸವರಾಜ್ ಗದುಗಿನ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಾಸವಿ ವಿದ್ಯಾಲಯದ ಮಕ್ಕಳಿಗಾಗಿ ಪರಿಷತ್ತಿನಿಂದ ಪ್ರಬಂಧ ಸ್ಪರ್ಧೆ ಮತ್ತು ಭಾವಗೀತೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ವಾಸವಿ ಎಜ್ಯುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಪಿ.ಎನ್. ಸುರೇಶ್, ಸನ್ಮಾರ್ಗ ಗೆಳೆಯರ ಬಳಗದ ಚಂದ್ರಶೇಖರ ಆಚಾರಿ, ಕಸಾಪ ಜಿಲ್ಲಾ ಅಧ್ಯಕ್ಷ ಡಾ. ನಿಷ್ಠಿ ರುದ್ರಪ್ಪ, ಬಸವರಾಜ್ ಬಿಸಲಹಳ್ಳಿ, ಹಿಂದುಪುರ ಸರ್ ಹಾಸ್ಯ ಕಲಾವಿದರಾದ ಎ. ಎರ್ರಿಸ್ವಾಮಿ ಉಪಸ್ಥಿತರಿದ್ದರು.