ಬೆಂಗಳೂರು,ಜ,೨೦: ರಾಜ್ಯದಲ್ಲಿ ಕೋವಿಡ್-೧೯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಶುಕ್ರವಾರ ೧೩೮ ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ೪೫೫ಕ್ಕೆ ಇಳಿಕೆಯಾಗಿದೆ.
ಕಳೆದ ೨೪ ಗಂಟೆಗಳಲ್ಲಿ ಬೆಂಗಳೂರಿನಲ್ಲಿ ೫೨ ಪಾಸಿಟಿವ್ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ೧೩೮ ಮಂದಿಗೆ ಕೋವಿಡ್-೧೯ ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿAದ ಇಂದು ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಕೋವಿಡ್ ನಿಂದ ೩೫೦ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ೬೮೩೭ ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. ೨.೦೧ ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿತರಲ್ಲಿ ೪೧೭ ಮಂದಿ ಮನೆ ಆರೈಕೆಗೆ ಒಳಗಾದರೆ, ೨೭ ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ೮ ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.