ಸುವರ್ಣವಾಹಿನಿ ಸುದ್ದಿ
ಬಳ್ಳಾರಿ,ಜ,೨೦: ೨೦೨೪-೨೫ನೇ ಸಾಲಿಗೆ ಆರನೇ ತರಗತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಆಯ್ಕೆ ಆಗಬೇಕೆಂದು ಮಹತ್ವಾಕಾಂಕ್ಷೆ ಹೊಂದಿರುವ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರು, ಈ ಕ್ಷೇತ್ರದ ಶಾಸಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ಬಿ.ನಾಗೇಂದ್ರ ಅವರು ಪ್ರಸಕ್ತ ವರ್ಷ ಪರೀಕ್ಷೆ ಬರೆಯುವ ಐದನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಕಲಿಕೋಪಕರಣಗಳನ್ನು ತಾಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನೀಡಿ ಶುಭಕೋರಿದರು. ಶಾಲೆಯ ಮುಖ್ಯ ಗುರುಗಳಾದ ರವಿಚೇಳ್ಳಗುರ್ಕಿ, ಶಿಕ್ಷಕರಾದ ಮೋದಿನ್ ಸಾಬ್, ರಾಮಾಂಜಿನೇಯ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಮಹೇಶ ಮುಂತಾದವರು ಉಪಸ್ಥಿತರಿದ್ದರು.