ಬೆಂಗಳೂರು,ಜ,೨೧: ಜ,೨೩ ರಂದು ೫೪೫ ಪಿಎಸ್ಐ ಮರು ಪರೀಕ್ಷೆ ಹಿನ್ನೆಲೆ, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಆದೇಶ ಹೊರಡಿಸಿದ್ದಾರೆ.
ಪಿಎಸ್ಐ ಮರು ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಲಿದ್ದು, ಒಟ್ಟು ೧೧೭ ಕೇಂದ್ರಗಳಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ ೭ ಗಂಟೆಯಿAದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.೫೪೫ ಪಿಎಸ್ಐ ಮರು ಪರೀಕ್ಷೆಗೆ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಲ್ಲಾ ತಯಾರಿಗಳನ್ನು ನಡೆಸುತ್ತಿದ್ದು, ಅಭ್ಯರ್ಥಿಗಳು ಕೂಡ ಪರೀಕ್ಷೆ ಬರೆಯಲು ಸಜ್ಜಾಗಿದ್ದರು. ಈ ನಡುವೆ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದಿತ್ತು.
ಪ್ರಶ್ನೆ ಪತ್ರಿಕೆ ಲೀಕ್ ಆರೋಪ ಸಂಬAಧ ಇಂಟೆಲಿಜೆನ್ಸ್ ವಿಭಾಗದ ಸಬ್ ಇನ್ಸ್ಪೆಕ್ಟರ್ ಆಗಿರುವ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಸಂಬAಧ ಅಭ್ಯರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ. ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು, ಇನ್ಸ್ಪೆಕ್ಟರ್ ಲಿಂಗಯ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.