ಬೆಂಗಳೂರು ಜ,೨೨: ಅಯೋಧ್ಯೆಯ ರಾಮ ಮಂದಿರದಲ್ಲಿ) ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ. ಜತೆಗೆ, ರಾಮ ರಾಜ್ಯ ಕನಸು, ಗ್ಯಾರಂಟಿಗಳಿAದ ನನಸಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.
ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ಡಿಕೆ ಶಿವಕುಮಾರ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.
ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು.
ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ತೆರಳದೇ ಇರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಕಾಂಗ್ರೆಸ್ ನಾಯಕರು ಯಾರೂ ಆಹ್ವಾನ ಇದ್ದರೂ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ತೆರಳದೇ ಇರಲು ನಿರ್ಧರಿಸಿದ್ದಾರೆ. ರಾಮ ಮಂದಿರ ಉದ್ಘಾಟನೆ ಬಿಜೆಪಿ ಕಾರ್ಯಕ್ರಮ ಎಂದೂ ಕಾಂಗ್ರೆಸ್ನ ಕೆಲವು ನಾಯಕರು ಟೀಕಿಸಿದ್ದಾರೆ. ಈ ಮಧ್ಯೆ, ರಾಮ ಮಂದಿರಕ್ಕೆ ದೇಣಿಗೆ ನೀಡಿದವರಲ್ಲಿ ಅನೇಕ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂಬುದು ಗಮನಾರ್ಹ. ಈ ಎಲ್ಲ ಬೆಳವಣಿಗೆಗಳ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಶುಭ ಕೋರಿದ್ದು, ರಾಮ ರಾಜ್ಯದ ಕನಸು ನನಸಾಗಿಸುವಲ್ಲಿ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಇದೆ ಎಂದು ಪ್ರತಿಪಾದಿಸಿದ್ದಾರೆ.