ಸುವರ್ಣವಾಹಿನಿ ಸುದ್ದಿ
ಬಳ್ಳಾರಿ,ಜ,೨೩: ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯು ಮಹಾನ್ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ೧೨೭ನೇ ಜನ್ಮ ವರ್ಷಾಚರಣೆ ಅಂಗವಾಗಿ ನಗರದ ವಾರ್ಡ್ಲಾ ಹೈಸ್ಕೂಲ್ ನಲ್ಲಿ ಕಾರ್ಯಕ್ರಮ ನಡೆಯಿತು. ನೇತಾಜಿ ಭಾವಚಿತ್ರಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ದ್ವಾರಕಾ ಬಾಯಿ ಅವರು ಮಾಲಾರ್ಪಣೆ ಮಾಡಿದರು. ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷೆ ಎಂ.ಶಾAತಿ ಅವರು ಮಾತನಾಡಿ….. “ಮಿಲಿಯಾಂತರ ಭಾರತೀಯರ ಪರವಾಗಿ ನಿಂತು, ಸ್ವಾತಂತ್ರ್ಯದ ಧ್ಯೇಯಕ್ಕಾಗಿ, ನನ್ನ ಜೀವನವನ್ನು ನೀಡಲು ಸಿದ್ಧನಿದ್ದೇನೆ. ಸತ್ಯಕ್ಕೆ ಏನಾದರೂ ಮಹತ್ವವಿದ್ದಲ್ಲಿ, ದೇಶದ ಜನ ಮುಂದೊAದು ದಿನ ನನ್ನ ಮನಸ್ಸಿನ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತಾರೆ.” ಎಂಬುದು ಸ್ವಾತಂತ್ರ್ಯ ಸಂಗ್ರಾಮದ ಜ್ವಾಲೆಗೆ ತನ್ನ ರಕ್ತ ತರ್ಪಣ ಮಾಡಿದ ಧೀರನೊಬ್ಬನ ನುಡಿಗಳು! ಆ ಧೀರನೇ, ನೇತಾಜಿ ಸುಭಾಷ್ ಚಂದ್ರ ಬೋಸ್.
ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಅಧಃಪತನ ಹೊಂದುತ್ತಿರುವ ಪ್ರಸಕ್ತ ಸಾಮಾಜಿಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ನಡುವೆ ಸ್ವಾತಂತ್ರ್ಯ ಹೋರಾಟದ ಮಹಾನ್ ಕ್ರಾಂತಿಕಾರಿಗಳಾದ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್ ಹಾಗೂ ಇನ್ನಿತರ ಉನ್ನತ ವಿಚಾರ, ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳ ನಡುವೆ ಕೊಂಡ್ಯೊಯ್ಯುವುದು ಅತ್ಯವಶ್ಯಕವಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಪ್ರತಿಯೊಬ್ಬರಿಗೂ ಶಿಕ್ಷಣ, ಉದ್ಯೋಗ, ಹೆಣ್ಣು ಮಕ್ಕಳು ಘನತೆ ಗೌರವದಿಂದ ಬದುಕುವ ಸಮ ಸಮಾಜ ನಿರ್ಮಾಣದ ಕನಸನ್ನು ಕಂಡಿದ್ದರು. ಆದರೆ ಅದಕ್ಕೆ ತದ್ವಿರುದ್ಧವಾಗಿ ಪ್ರಸ್ತುತ, ಶಿಕ್ಷಣದ ವ್ಯಾಪಾರೀಕರಣ, ನಿರುದ್ಯೋಗ, ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಲೇ ಇವೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ನೇತಾಜಿಯವರ ವಿಚಾರಗಳನ್ನು ಅರಿತು, ಮೈಗೂಡಿಸಿಕೊಂಡು ಅನ್ಯಾಯ ಹಾಗೂ ಅಸತ್ಯದೊಂದಿಗೆ ಹೋರಾಡುತ್ತಾ ನೇತಾಜಿ ಅವರ ಕನಸಿನ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡಬೇಕಿದೆ ಎಂದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ಉನ್ನತ ಸಂಸ್ಕೃತಿ, ನೀತಿ-ನೈತಿಕತೆಗಳನ್ನು ಮೇಲೆತ್ತುವ ಉದ್ದೇಶದೊಂದಿಗೆ ಜನವರಿ ೨೩ರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ೧೨೭ನೇ ಜನ್ಮ ವಾರ್ಷಿಕದ ಸಂದರ್ಭದಲ್ಲಿ ರಾಜ್ಯದಾದ್ಯಂತ ನೂರಾರು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಆಯೋಜಿಸಲಾಗಿದ್ದ.. ಪ್ರಬಂಧ, ರಸಪ್ರಶ್ನೆ ಹಾಗೂ ಚಿತ್ರಕಲೆ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಎಐಡಿಎಸ್ಓ ಜಿಲ್ಲಾ ಸೆಕ್ರೆಟರಿಯೇಟ್ ಸದಸ್ಯರು ಸಮೀರ್ ಇತರರು ಉಪಸ್ಥಿತರಿದ್ದರು.