ಬೆಂಗಳೂರು,ಜ,೨೩: ಎಲ್ಲಾ ಶಾಲೆಗಳ ೬ ನೇ ತರಗತಿ ನಂತರದ ವಿದ್ಯಾರ್ಥಿಗಳಿಗೆ ಗಾಂಧೀಜಿ ವಿಚಾರ ಕುರಿತ ಪ್ರಬಂಧ ಸ್ಪರ್ಧೆ ಆಯೋಜಿಸಲು ಸೂಚಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊAಡಿರುವ ಮುಖ್ಯಮಂತ್ರಿ, ‘೨೧ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು” ಎಂಬ ವಿಷಯದ ಕುರಿತಾದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವುದರಿಂದ ಗಾಂಧೀಜಿಯವರನ್ನು ಅರಿತುಕೊಳ್ಳಲು ಇನ್ನೂ ಹೆಚ್ಚಿನ ಅವಕಾಶ ನೀಡಿದಂತಾಗುತ್ತದೆ, ಹಾಗಾಗಿ ಈ ತಿಂಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಕ್ರಮ ವಹಿಸಬೇಕು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ‘ಪ್ರತಿ ಶಾಲೆಗಳ ೬ನೆ ತರಗತಿ ನಂತರದ ವಿದ್ಯಾರ್ಥಿಗಳಿಗೆ ( ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ವರೆಗೆ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆ ಆಯೋಜಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.