ಸುವರ್ಣವಾಹಿನಿ ಸುದ್ದಿ
ಹೊಸಪೇಟೆ, ಜ.೨೪: ಪ್ರಯೋಗಗಳನ್ನು ಮಾಡುವುದರ ಮೂಲಕ ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ತಿಳಿಯಲು ಆಸಕ್ತಿಯನ್ನು ಹೆಚ್ಚಿಸುತ್ತದೆ ಎಂದು ಸರ್ಕಾರಿ ಪದವ ಪೂರ್ವ ಕಾಲೇಜಿನ ಉಪನ್ಯಾಸಕ ದೊಡ್ಡ ಹನುಮಂತಪ್ಪ ಹೇಳಿದರು.
ನಗರದ ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ ಕ್ಯೂ ಎ ಸಿ ಏರ್ಪಡಿಸಲಾಗಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪ್ರಯೋಗಗಳನ್ನು ಮಾಡುವುದರ ಮೂಲಕ ತಮ್ಮ ಆಸಕ್ತಿಯನ್ನು ವಿಜ್ಞಾನವನ್ನು ಅಭ್ಯಾಸ ಮಾಡಲು ಸಾಧ್ಯವಾಗುತ್ತದೆ ಹಾಗೂ ಮೂಲವಿಜ್ಞಾನದ ಕಡೆ ತಮ್ಮ ಆಸಕ್ತಿ ಬೆಳೆ ಯುತ್ತದೆ ಎಂದು ತಿಳಿಸಿದರು.
ನಂತರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಲ್ಲಿಕಾರ್ಜುನ್ ಮಾತನಾಡಿ, ಪ್ರಯೋಗಗಳನ್ನು ಮಾಡುವುದರ ಮೂಲಕ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ವಸ್ತು ಪ್ರದರ್ಶನವನ್ನು ತಾಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವೀಕ್ಷಿಸಿ ಇದರ ಲಾಭವನ್ನು ಪಡೆಯಬಹುದಾಗಿದೆ ಎಂದು ಐಕ್ಯೂ ಏ ಸಿ ಸಂಚಾಲಕರಾದ ಡಾ. ಗುರುರಾಜ್ ಅವರಾದಿ ತಿಳಿಸಿದರು.
ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶಿವಪ್ಪ ಹಾಗೂ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರುಗಳಾದ ಟಿ ಹೆಚ್ ಎಂ ದಾರುಕ ಸ್ವಾಮಿ,ಮಂಜುನಾಥ,ಸುಜಾತ, ರಾಧಾ ಹಾಗೂ ಸಸ್ಯಶಾಸ್ತ್ರ ಉಪನ್ಯಾಸಕರಾದ ರಾಕೇಶ,ಕಾದಂಬರಿ ಪ್ರಾಣಿ ಶಾಸ್ತ್ರಉಪನ್ಯಾಸಕರಾದ ಪವನ್ ರಾಮಕೃಷ್ಣ ಹಾಗೂ ಗಣಕಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಹರೀಶ್ ಗುಜ್ಜಾರ ಹಾಜರಿದ್ದರು.