ಸುವರ್ಣವಾಹಿನಿ ಸುದ್ದಿ
ಬಳ್ಳಾರಿ,ಜ.೨೪: ಹೆಣ್ಣು ಮಗುವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದ್ದು, ಈ ದಿಶೆಯಲ್ಲಿ ಕುಟುಂಬದ ಸ್ವಾಸ್ಥö್ಯವನ್ನು ಸಮಾಜದ ಸ್ವಾಸ್ಥö್ಯವನ್ನು ಕಾಪಾಡಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ಬಳ್ಳಾರಿ, ಜಿಲ್ಲಾ ಆಸ್ಪತ್ರೆ, ಎ.ಎನ್.ಎಮ್ ತರಬೇತಿ ಕೇಂದ್ರ, ಮಹಿಮಾ ನರ್ಸಿಂಗ್ ಕಾಲೇಜ್ ಇವರ ಸಂಯುಕ್ತಾಶ್ರÀಯದಲ್ಲಿ “ಹೆಣ್ಣು ಮಗು ಉಳಿಸಿ” ಎಂಬ ಆಶಯದಡಿ ರಾಷ್ಟಿçÃಯ ಹೆಣ್ಣು ಮಗು ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರ ಹೆಣ್ಣು ಮಗುವಿನ ಉಳಿವಿಗಾಗಿ ಭ್ರೂಣ ಲಿಂಗಪತ್ತೆ ತಂತ್ರ ನಿಷೇಧ ಕಾಯ್ದೆ ೧೯೯೪ರ ಕಾಯ್ದೆ ಅಡಿಯಲ್ಲಿ ಹೆಣ್ಣು ಭ್ರೂಣ ಪತ್ತೆ ಮಾಡುವವರನ್ನು ಮತ್ತು ಕೇಳುವವರನ್ನು ಜೈಲು ಶಿಕ್ಷೆ ಹಾಗೂ ದಂಡವಿದೆ. ಕಾಯ್ದೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಲು ದಂಡ ಹೆಚ್ಚಿಸುವ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಸಮಾಜದಲ್ಲಿ ಕುಟುಂಬದ ಕಣ್ಣಾಗಿರುವ ಹೆಣ್ಣನ್ನು ಬೆಳೆಸಿ, ಉಳಿಸಿ, ಓದಿಸುವ ಮೂಲಕ ಭವ್ಯ ಭಾರತದ ಅಡಿಪಾಯಕ್ಕೆ ನಾವೆಲ್ಲರೂ ಕಟ್ಟಬದ್ದರಾಗಬೇಕಿದೆ ಎಂದು ಕರೆ ನೀಡಿದರು.
ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿ ಡಾ.ರವಿಶಂಕರ್ ಸಜ್ಜಲ್ ಅವರು ಮಾತನಾಡಿ, ಹೆಣ್ಣು ಮಗುವಿನ ಸುರಕ್ಷತೆಗಾಗಿ ಮತ್ತು ಹೆಣ್ಣು ಮಗುವಿನ ಉಳಿವಿಗಾಗಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಬಳ್ಳಾರಿ ಜಿಲ್ಲೆಯಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳಲ್ಲಿ ಯಾವುದೇ ಸಂದರ್ಭದಲ್ಲಿ ಸ್ಕಾö್ಯನಿಂಗ್ ಕೇಂದ್ರಗಳಲ್ಲಿ ಹೆಣ್ಣು ಮಗುವಿನ ಭ್ರ್ರೂಣವನ್ನು ಹೇಳದಂತೆ ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿದ್ದು, ಸಾರ್ವಜನಿಕರು ಸಹ ಭ್ರೂಣದ ಮಾಹಿತಿಯನ್ನು ಕೇಳಬಾರದು ಎಂದು ವಿನಂತಿಸಿದ ಅವರು, ಸಮಾಜದ ಎರಡು ನಾಣ್ಯಗಳಾದ ಗಂಡು-ಹೆಣ್ಣಿಗೆ ಸಮಾನ ಅವಕಾಶಗಳನ್ನು ನಾವೆಲ್ಲರೂ ನೀಡಬೇಕೆಂದು ತಿಳಿಸಿದರು.
ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ಸಮಾಜದ ಸ್ವಾಸ್ಥö್ಯ ಕಾಪಾಡಲು ಗಂಡು-ಹೆಣ್ಣು ನಾಣ್ಯದ ಎರಡು ಮುಖಗಳು ಇರುವಂತೆ ಕುಟುಂಬದ ಹೆಣ್ಣು ಮಗು ನೂರು ಗಂಡು ಮಕ್ಕಳಿಗೆ ಸಮವಾಗಿದ್ದಾಳೆ. ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿ ಹೆಣ್ಣು ಮಗಳ ಸಾಧನೆ ದೇಶಕ್ಕೆ ಮುಕುಟವಾಗುವಂತೆ ಸಾಧನೆಗಳನ್ನು ಮಾಡುತ್ತಿದ್ದು, ಹಲವಾರು ಕ್ರೀಡಾಪಟುಗಳು ರಾಜಕೀಯ ಕ್ಷೇತ್ರಗಳಲ್ಲಿಯೂ ಇದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಹೆಣ್ಣು ಮಗುವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಪೂರ್ಣಿಮ ಕಟ್ಟಿಮನಿ, ಐಎಂಎ ಕಾರ್ಯದರ್ಶಿ ಡಾ.ರಾಘವೇಂದ್ರ, ಉಪಾಧ್ಯಕ್ಷ ಡಾ.ಮಾಣಿಕ್ ರಾವ್ ಕುಲಕರ್ಣಿ, ಜಂಟಿ ಕಾರ್ಯದರ್ಶಿ ಡಾ.ಸಂಗೀತ ಕಟ್ಟಿಮನಿ, ಮಹಿಮಾ ಸಂಸ್ಥೆಯ ಡಾ.ಮಲ್ಲಿಕಾರ್ಜುನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ, ಕುಟುಂಬ ಕಲ್ಯಾಣ ಕಾರ್ಯಕ್ರಮ ವಿಭಾಗದ ಅರುಣ್ ಕುಮಾರ್, ಗೋಪಾಲ್.ಕೆ.ಎಚ್., ನವೀನ್, ಎ.ಎನ್.ಎಮ್ ತರಬೇತಿ ಕೇಂದ್ರದ ಶಿವಪ್ಪ ಜಾಥಾದಲ್ಲಿ ಭಾಗವಹಿಸಿದ್ದರು.
ಜಾಥಾವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಯಿತು.