ಬಳ್ಳಾರಿ. ಜ.25 ,ಭಾರತದ ಸಂವಿಧಾನವನ್ನು ಅಂಗೀಕರಿಸಿಕೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ ಸಂವಿಧಾನದ ಆಶಯ ಮತ್ತು ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕರ್ನಾಟಕ ಸರ್ಕಾರದ ವತಿಯಿಂದ “ಸಂವಿಧಾನ ಜಾಗೃತಿ ಜಾಥಾ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ದಿನಾಂಕ: 26-01-2024 ರಂದು ಬಳ್ಳಾರಿ ಜಿಲ್ಲಾ ಕೇಂದ್ರದ ವಿಮ್ಸ್ ಮೈದಾನದಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮಕ್ಕೆ ಮಾನ್ಯ ಪರಿಶಿಷ್ಟ ಪಂಗಡ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು, ಸಂಸದರು, ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರುಗಳು ಹಾಗೂ ಜನಪ್ರತಿನಿಧಿಗಳು ಚಾಲನೆ ನೀಡಲಿದ್ದಾರೆ.
ಈ ಸ್ತಬ್ಧಚಿತ್ರವು ದಿನಾಂಕ 26ನೇ ಜನವರಿ 2024 ರಿಂದ ಫೆಬ್ರವರಿ 23ನೇ ತಾರೀಖಿನವರೆಗೆ ಜಿಲ್ಲೆಯಾದ್ಯಂತ ದಿನಾಂಕ: 26-01-2024 ರಿಂದ ದಿನಾಂಕ: 02-02-2024 ರವರೆಗೆ ಬಳ್ಳಾರಿ ತಾಲ್ಲೂಕಿನಲ್ಲಿ ದಿನಾಂಕ: 02-02-2024 ರಿಂದ ದಿನಾಂಕ: 09-02-2024 ರವರೆಗೆ ಸಿರುಗುಪ್ಪ ತಾಲ್ಲೂಕಿನಲ್ಲಿ ದಿನಾಂಕ: 10-02-2024 ರಿಂದ ದಿನಾಂಕ: 13-02-2024 ರವರೆಗೆ ಕುರುಗೋಡು ತಾಲ್ಲೂಕಿನಲ್ಲಿ, ದಿನಾಂಕ: 13-02-2024 ರಿಂದ ದಿನಾಂಕ:16-02-2024 ರವರೆಗೆ ಕಂಪ್ಲಿ ತಾಲ್ಲೂಕಿನಲ್ಲಿ ಹಾಗೂ ದಿನಾಂಕ: 16-02-2024 ರಿಂದ ದಿನಾಂಕ: 23-02-2024 ರವರೆಗೆ ಸಂಡೂರು ತಾಲ್ಲೂಕಿನಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚರಿಸಲಿದ್ದು, ಜನಪ್ರತಿನಿಧಿಗಳು, ಸಂಘ ಸಂಘ ಸಂಸ್ಥೆಗಳ ಮುಖಂಡರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರುತ್ತೇನೆ. ಜಗತ್ತಿನ ಶ್ರೇಷ್ಠ ಸಂವಿಧಾನಗಳಲ್ಲೊಂದಾದ ಭಾರತದ ಸಂವಿಧಾನದ ಮೌಲ್ಯಗಳನ್ನು ಅಳವಡಿಸಿಕೊಂಡು ಸಂವಿಧಾನದ ಶ್ರೇಷ್ಠತೆಯನ್ನು ಎತ್ತಿ ಹಿಡಿಯಬೇಕಾಗಿ ಈ ಮೂಲಕ ತಮ್ಮಲ್ಲಿ ಮನವಿ ಮಾಡುತ್ತೇನೆ.