ಬೆಂಗಳೂರು: ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ ಶೇ.25 ಮತ್ತು ರಾಜ್ಯದಲ್ಲಿ ಶೇ. 10 ರಷ್ಟು ಸೈಬರ್ ಅಪರಾಧಗಳಾಗಿವೆ ಎಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಹೇಳಿದ್ದಾರೆ. ನಗರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗುರುವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಡಿಜಿ ಮತ್ತು ಐಜಿಪಿ, ವಾಸ್ತವವಾಗ ಸೈಬರ್ ಅಪರಾಧಗಳ ಸಂಖ್ಯೆಯು ದೇಶಾದ್ಯಂತ ಮತ್ತು ಜಾಗತಿಕವಾಗಿ ಹೆಚ್ಚಾಗುವ ಸಾಧ್ಯತೆಯಿದೆ ಎಂದರು. ಹೆಚ್ಚುವರಿ ಡಿಸಿಪಿ ಮತ್ತು ಇತರ ಉನ್ನತ ಮಟ್ಟದ ಮೇಲ್ವಿಚಾರಣಾ ಹುದ್ದೆಗಳಿಗೆ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗುವುದು ಎಂದು ಅವರು ಹೇಳಿದರು. ಮುಂದಿನ ಆರು ತಿಂಗಳಲ್ಲಿ ಕರ್ನಾಟಕದಾದ್ಯಂತ ಸೈಬರ್ ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಎಂದು ಅವರು ತಿಳಿಸಿದರು. ಸೈಬರ್ ಅಪರಾಧ ನಿಯಂತ್ರಣ ಕುರಿತು ಇನ್ನು ಮುಂದೆ ಹೆಚ್ಚಿನ ಗಮನ ನೀಡಲಾಗುವುದು, “ಇನ್ಸ್ಪೆಕ್ಟರ್ಗಳು ಮತ್ತು ಸಬ್ಇನ್ಸ್ಪೆಕ್ಟರ್ಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ನಿಯಮಿತವಾಗಿ ನಡೆಸಲಾಗುವುದು, ಜೊತೆಗೆ ಕರ್ನಾಟಕವನ್ನು ಡ್ರಗ್ಸ್ ಮುಕ್ತ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದರು. ಕಳೆದ ವರ್ಷ, ಎನ್ಡಿಪಿಎಸ್ ಅಡಿಯಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳು ದಾಖಲಾಗಿದ್ದವು. 125 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದ್ದು, 150 ವಿದೇಶಿ ಪ್ರಜೆಗಳು ಸೇರಿದಂತೆ 7,000 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.