ಫರೂಕಾಬಾದ್: ಮಂಜು ಮುಸುಕಿದ ಕಾರಣ ಗೋಚರತೆ ಕಡಿಮೆಯಾದ ಹಿನ್ನೆಲೆಯಲ್ಲಿ ಗುರುವಾರ ಕಂಟೈನರ್ ಟ್ರಕ್ ಹಾಗೂ ಆಟೋ-ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಂಟೈನರ್ ಲಾರಿ ಚಾಲಕನ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಪೂರ್ಣಿಮಾ ಸಂದರ್ಭದಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಲು ಫರೂಕಾಬಾದ್ಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಒನ್ ವೇನಲ್ಲಿ ಬಂದ ಟ್ರಕ್ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ನಗರದಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಅಲಹಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಸುಗ್ಸುಗಿ ಗ್ರಾಮದ ಬಳಿ ಬರೇಲಿ-ಫರೂಕಾಬಾದ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮೀನಾ ತಿಳಿಸಿದ್ದಾರೆ.
ಜಲಾಲಾಬಾದ್ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಕಂಟೈನರ್ ಡಿಕ್ಕಿ ಹೊಡೆದಿದ್ದು, ಪೂರ್ಣಿಮಾ ಸಂದರ್ಭದಲ್ಲಿ ಗಂಗಾ ಸ್ನಾನಕ್ಕೆ ಫರೂಕಾಬಾದ್ನ ಘಾಟಿಯಾ ಘಾಟ್ಗೆ ಹೋಗುತ್ತಿದ್ದ 12 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.