ಬಳ್ಳಾರಿ.ಜ.26. ಭಾರತೀಯರಾದ ನಾವು ಸಮಾನತೆ,ಸಹಬಾಳ್ವೆ,ಸಹೋದರತ್ವ ಹಾಗೂ ಸಾರ್ವಭೌಮತೆಯಿಂದ ಬಾಳಿದಾಗ ಮಾತ್ರ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನದ ಆಶಯಗಳು ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಕಂಡ ರಾಮರಾಜ್ಯದ ಕನಸು ಈಡೇರಿಸಿದಂತೆ ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ತಾಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಭಾರತ ಸ್ವಾತಂತ್ರ್ಯ ನಂತರ ಇಲ್ಲಿಯ ವರೆಗೆ ಎಲ್ಲಾ ಅಭೂತಪೂರ್ವ ಸಾಧನೆ ಮಾಡಿದೆ, ಮಾಡುವುದು ಇನ್ನೂ ಇದೆ.ಆದ್ದರಿಂದ ವಿದ್ಯಾರ್ಥಿಗಳು ಚೆನ್ನಾಗಿ ಓದಿ ದೇಶದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಹೇಳಿದರು. ದೈಹಿಕ ಶಿಕ್ಷಣ ಶಿಕ್ಷಕಿ ಸುಧಾ ಅವರ ಮಾರ್ಗದರ್ಶನದಲ್ಲಿ ಪಥಸಂಚಲನ ಮಾಡಿದರೆ, ಏಳನೇ ತರಗತಿ ವಿದ್ಯಾರ್ಥಿನಿ ಕೆ.ಅನುಷ ಭಾಷಣ ಮಾಡಿದಳು. ಎಸ್. ಡಿ.ಎಂ.ಸಿ. ಅಧ್ಯಕ್ಷ ದೊಡ್ಡ ಕುಮಾರ ಧ್ವಜಾರೋಹಣ ನೆರವೇರಿಸಿದರೆ,ಊರಿನ ಹಿರಿಯರಾದ ಶಿವನಗೌಡ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು.ಹೊನ್ನೂರಸ್ವಾಮಿ, ಕೆ.ಪಿ.ಸುಂಕಣ್ಣ, ಗಂಗಾಧರ ,ಪರಮೇಶ್ವರಪ್ಪ ಮುಂತಾದವರು ಉಪಸ್ಥಿತರಿದ್ದರು.ಕೊನೆಯಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.