ಬಳ್ಳಾರಿ,ಜ.26 : 75ನೇ ಗಣರಾಜ್ಯೋತ್ಸವದ ದಿನದ ಅಂಗವಾಗಿ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಶ್ವೇತ, ಉಪ ಮಹಾಪೌರರಾದ ಬಿ.ಜಾನಕಿ, ಬಳ್ಳಾರಿ ವಲಯ ಪೆÇಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.