ನವದೆಹಲಿ,ಜ. 27: ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ಬಿಜೆಪಿ ನೇಮಕ ಮಾಡಿದೆ. ಸಂಸದ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಕರ್ನಾಟಕದ ಉಸ್ತುವಾರಿಯನ್ನಾಗಿ ಮತ್ತು ಸುಧಾಕರ್ ರೆಡ್ಡಿ ಅವರನ್ನು ಕರ್ನಾಟಕದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಶನಿವಾರ ಆದೇಶ ಹೊರಡಿಸಿದೆ. ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ನೇಮಕ ಅವರನ್ನು ನೇಮಕ ಮಾಡಲಾಗಿದೆ.ವಿಜಯಪಾಲ್ ತೋಮರ್ ಅವರನ್ನು ಒಡಿಶಾ ಹಾಗೂ ಶ್ರೀಕಾಂತ್ ಶರ್ಮಾ ಅವರನ್ನು ಹಿಮಾಚಲದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.