ಫೆ.03 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.02: ನಗರದಲ್ಲಿ ಬೀದಿ ದೀಪ ಫೇಸ್ಲೈನ್ ಅಳವಡಿಸುವ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 11 ಕೆ.ವಿ ಫೀಡರ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಫೆ.03 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-7 ಫೀಡರ್ನ ಬಸವನಕುಂಟೆ, ಕೋಟೆ ಪ್ರದೇಶ, 1ನೇ ಗೇಟ್, 2ನೇ ಗೇಟ್, ಸಿದ್ದಾರ್ಥ ನಗರ, ಸುಧಾಕ್ರಾಸ್, ಓ.ಪಿ.ಡಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದ್ದು, ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.