ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ದೇಶಾದ್ಯಂತ ಕಾರ್ಯಚಟುವಟಿಕೆಯನ್ನು ಆರಂಭಿಸಿದೆ. ಭೂತ್ ಮಟ್ಟದಲ್ಲಿ ಸಂಘಟನಾ ಕಾರ್ಯ ನಡೆಸಲಾಗುತ್ತಿದೆ. ಈ ನಡುವೆ, ದೆಹಲಿಯಲ್ಲಿ ಫೆಬ್ರವರಿ 17 ರಿಂದ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದ್ದು, ಪ್ರತಿ ರಾಜ್ಯದ ನಾಯಕರನ್ನು ಆಹ್ವಾನಿಸಲಾಗಿದೆ.
ಬೆಂಗಳೂರು, ಫೆ.8: ಲೋಕಸಭಾ ಚುನಾವಣೆ (Lok Sabha Election 2024) ಸಮೀಪಿಸುತ್ತಿದ್ದು, ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ದೇಶಾದ್ಯಂತ ಕಾರ್ಯಚಟುವಟಿಕೆಯನ್ನು ಆರಂಭಿಸಿದೆ. ಭೂತ್ ಮಟ್ಟದಲ್ಲಿ ಸಂಘಟನಾ ಕಾರ್ಯ ನಡೆಸಲಾಗುತ್ತಿದೆ. ಈ ನಡುವೆ, ದೆಹಲಿಯಲ್ಲಿ ಫೆಬ್ರವರಿ 17 ರಿಂದ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಿಣಿ ಸಭೆ (National BJP Executive Meeting) ಆಯೋಜಿಸಲಾಗಿದ್ದು, ಪ್ರತಿ ರಾಜ್ಯದ ನಾಯಕರನ್ನು ಆಹ್ವಾನಿಸಲಾಗಿದೆ.
ದೆಹಲಿಯ ಭಾರತ ಮಂಟಪದಲ್ಲಿ ನಡೆಯುವ ಕಾರ್ಯಕಾರಿಣಿ ಸಭೆಗೆ ಎಲ್ಲಾ ರಾಜ್ಯಗಳ ಬಿಜೆಪಿ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಪದಾಧಿಕಾರಿಗಳಿಗೂ ಆಹ್ವಾನ ನೀಡಲಾಗಿದೆ. ಸಭೆಯ ಮೊದಲ ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಷಣ ಮಾಡಲಿದ್ದು, ಕೊನೆಯ ದಿನ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.
ಕಾರ್ಯಕಾರಿಣಿ ಸಭೆಗೂ ಒಂದು ದಿನ ಮುನ್ನ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಿಗದಿಯಾಗಿದೆ. ಪ್ರಧಾನ ಕಾರ್ಯದರ್ಶಿಗಳು, ಕೋಶಗಳ ಸಂಚಾಲಕರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಪುರಸಭೆಗಳು, ನಗರ ಪಂಚಾಯಿತಿಗಳು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರನ್ನು ಸಭೆಗೆ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಕಾರ್ಯಕಾರಿಣಿ, ರಾಷ್ಟ್ರೀಯ ಪರಿಷತ್ತಿನ ಪದಾಧಿಕಾರಿಗಳು, ದೇಶಾದ್ಯಂತ ಜಿಲ್ಲಾಧ್ಯಕ್ಷರು, ಜಿಲ್ಲಾ ಉಸ್ತುವಾರಿಗಳು, ಲೋಕಸಭಾ ಉಸ್ತುವಾರಿಗಳು, ಕ್ಲಸ್ಟರ್ ಉಸ್ತುವಾರಿಗಳು, ಲೋಕಸಭೆಯ ಸಂಚಾಲಕರು, ಲೋಕಸಭೆ ವಿಸ್ತರಣಾಕಾರರು, ಶಿಸ್ತು ಸಮಿತಿ, ಹಣಕಾಸು ಸಮಿತಿ, ರಾಜ್ಯಗಳ ಮುಖ್ಯ ವಕ್ತಾರರು, ಮಾಧ್ಯಮ ಕೋಶದ ಸಂಚಾಲಕರು, ಸಂಚಾಲಕರು ಸೇರಿದಂತೆ ದೇಶದ ವಿವಿಧ ಹಂತಗಳ ಐಟಿ ಸೆಲ್ನ ಪದಾಧಿಕಾರಿಗಳನ್ನು ಆಹ್ವಾನಿಸಲಾಗಿದೆ.