ಬಳ್ಳಾರಿ,ಫೆ.೧೨: ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಡಿ. ಮೀನಹಳ್ಳಿ ತಾಯಣ್ಣ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರುಬಈ ಕ್ಷಣದಿಂದಲೇ ಜಾರಿಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಮತ್ತು ಸಿದ್ದಾಂತಗಳಿಗೆ ಬದ್ಧರಾಗಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ತೆಗೆದುಕೊಂಡು ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಲು ಈ ತಕ್ಣದಿಂದಲೇ ಕಾರ್ಯೋನ್ಮುಖರಾಗುವಂತೆ ಸೂಚಿಸಿದ್ದಾರೆ.
ಇದೇ ವೇಳೆ ಮಾತನಾಡಿದ ನೂತನ ಜಿಲ್ಲಾಧ್ಯಕ್ಷ ಡಿ. ಮೀನಹಳ್ಳಿ ತಾಯಣ್ಣ ಅವರು, ಬಳ್ಳಾರಿ ಜಿಲ್ಲೆಯ ಸಿರುಗುಪ್ಪ, ಕಂಪ್ಲಿ, ಸಂಡೂರು, ಬಳ್ಳಾರಿನಗರ ಮತ್ತು ಬಳ್ಳಾರಿ ಗ್ರಾಮಾಂತರ ಒಟ್ಟು ೫ ವಿಧಾನ ಸಭಾ ಕ್ಷೇತ್ರಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಒಟ್ಟು ಗೂಡಿಸಿ ಪಕ್ಷ ಸಂಘಟನೆ ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದರು.
ಅನಿವಾರ್ಯ ಕಾರಣಗಳಿಂದ ಪಕ್ಷ ಬಿಟ್ಟು ಹೋದ ಹಳೇ ಕಾರ್ಯಕರ್ತರು ಮತ್ತು ಮುಖಂಡರ ಮನೆ ಮನೆ ತೆರಳಿ ಅವರ ಮನವೊಲಿಸಿ ಪಕ್ಷ ಮರಳಿ ಸೇರ್ಪಡೆ ಮಾಡಿಕೊಂಡು ಇಡೀ ಜಿಲ್ಲೆಯಲ್ಲಿ ಪಕ್ಷವನ್ನು ತಳ ಮಟ್ಟದಿಂದ ಬಲಿಷ್ಠಗೊಳಿಸುವುದಾಗಿ ತಿಳಿಸಿದರು.