ಲಖನೌ: ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಕಾರು ಮತ್ತು ಬಸ್ ನಡುವೆ ಡಿಕ್ಕಿಯಾಗಿ ಕನಿಷ್ಠ ಐವರು ಸಜೀವ ದಹನ ದಹನವಾಗಿರುವ ಘಟನೆ ನಡೆದಿದೆ ಮಥುರಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಸೋಮವಾರ ನಡೆದಿದೆ.
ಕಾರು ಬಸ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಈ ವೇಳೆ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ನಂತರ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸಜೀವ ದಹನವಾಗಿದ್ದಾರೆ. ಆದರೆ, ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯಲ್ಲಿ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ನೆರವು ನೀಡುವಂತೆ ಸೂಚಿಸಿದ್ದಾರೆ.
ವರದಿಗಳ ಪ್ರಕಾರ ಕಾರಿನಲ್ಲಿದ್ದವರು ಆಗ್ರಾದಿಂದ ನೋಯ್ಡಾಗೆ ಹೋಗುತ್ತಿದ್ದರು. ಮಥುರಾದ ಎಕ್ಸ್ಪ್ರೆಸ್ವೇಯಲ್ಲಿ ಕಾರೊಂದರ ಮುಂದೆ ಬಸ್ ಚಲಿಸುತ್ತಿದ್ದು, ಅದರ ಟೈರ್ ಪಂಕ್ಚರ್ ಆಗಿದೆ. ಇದರಿಂದ ನಿಯಂತ್ರಣ ತಪ್ಪಿದ ಬಸ್ ಹಿಂಬದಿಯಿಂದ ಬಸ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದವರು ಸಕಾಲದಲ್ಲಿ ಹೊರಬರಲು ಸಾಧ್ಯವಾಗದೆ, ಸಜೀವ ದಹನವಾಗಿದ್ದಾರೆಂದು ತಿಳಿದುಬಂದಿದೆ.