ಅಮೃತ ಭಾರತ ನಿಲ್ದಾಣ ಯೋಜನೆಯಡಿ 2023ರ ಫೆಬ್ರವರಿಯಲ್ಲಿ ರಾಷ್ಟ್ರವ್ಯಾಪಿ 1275 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ರೈಲ್ವೆ ಸಚಿವಾಲಯವು ಪ್ರಾರಂಭಿಸಿತು. ಇದರ ಭಾಗವಾಗಿ ಈಗಾಗಲೆ ರಾಜ್ಯದ ವಿವಿಧ ಜಿಲ್ಲೆಗಳ, ತಾಲೂಕುಗಳ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಇದೀಗ ನೈಋತ್ಯ ವಲಯದ ರಾಜ್ಯದ 15 ರೈಲು ನಿಲ್ದಾಣಗಳ ಮೇಲ್ದರ್ಜೆ ಕಾಮಗಾರಿಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.
ನೈಋತ್ಯ ರೈಲ್ವೆ ವ್ಯಾಪ್ತಿಯ ಕರ್ನಾಟಕದ ಕೆಂಗೇರಿ, ಕೃಷ್ಣರಾಜಪುರ, ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕುಪ್ಪಂ, ಮಲ್ಲೇಶ್ವರ, ಮಾಲೂರು, ಮಂಡ್ಯ, ರಾಮನಗರ, ತುಮಕೂರು, ವೈಟ್ ಫೀಲ್ಡ್ ರೈಲು ನಿಲ್ದಾಣಗಳು ಒಟ್ಟು 327.13 ರೂ. ಕೋಟಿ ವೆಚ್ಚದಲ್ಲಿ ಉನ್ನತೀಕರಣಗೊಳ್ಳಲಿವೆ.