ಕಾರಟಗಿ : ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪರೀಕ್ಷೆಗೆ ಸುಲಭವಾಗಿ ತೆರಳಲು ಪಟ್ಟಣದ ಕಸ್ತೂರಿ ಬಾ ಮಹಿಳಾ ಮಹಾವಿದ್ಯಾಲಯ ವಿದ್ಯಾಸಂಸ್ಥೆ ವತಿಯಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸ್ಥೆಯ ಕಾರ್ಯದರ್ಶಿ ಅಮರೇಶ ಜಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷಾ ಬರೆಯಲು ತೆರಳುವ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಹಾಗೂ ವಾಹನದ ವ್ಯವಸ್ಥೆ ಇರುವುದಿಲ್ಲ, ಅಲ್ಲದೆ ಸಮಯದ ಅಭಾವದಿಂದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ತೆರಳದೆ ಗೊಂದಲದಿಂದ ಪರೀಕ್ಷೆ ಎದುರಿಸುವಂಥಾಗುತ್ತಿದ್ದು, ಈ ವಿಚಾರವನ್ನು ಗಮನಿಸಿ, ನಮ್ಮ ವಿದ್ಯಾಸಂಸ್ಥೆಯು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸುಲಭವಾಗಿ ಪರೀಕ್ಷಾ ಕೇಂದ್ರಕ್ಕೆ ಮುಟ್ಟಿಸಲು ಸಂಸ್ಥೆಯ ಶಾಲಾ ಬಸ್ ಗಳನ್ನು ಕಲ್ಪಿಸಲಾಗಿದೆ. ಪರೀಕ್ಷೆ ಕೊನೆಯವರೆಗೂ ಬಸ್ಗಳು ತೆರಳುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಸಂಪೂರ್ಣ ಉಚಿತವಾಗಿರುತ್ತದೆ ಎಂದು ತಿಳಿಸಿದ್ದಾರೆ.