ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಮುದ್ದಿನ ಮಗಳು ರುದ್ರಾಕ್ಷಿ ತನ್ನ ತಮ್ಮ ಹಯಗ್ರೀವನಿಗೆ ಲಾಲಿ ಹಾಡುತ್ತಾ ಪುಟ್ಟ ಕೈಗಳಿಂದ ತೊಟ್ಟಿಲು ತೂಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಹಂಚಿಕೊಂಡ ಕೇವಲ ಮೂರು ಗಂಟೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಲೈಕ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೆಲ ತಿಂಗಳುಗಳ ಹಿಂದಷ್ಟೇ ತಮ್ಮ ಎರಡನೆಯ ಮಗುವನ್ನು ಬರಮಾಡಿಕೊಂಡಿದ್ದಾರೆ. ಎರಡೂ ಮಕ್ಕಳ ಕ್ಯೂಟ್ ಕ್ಯೂಟ್ ವಿಡಿಯೋಗಳನ್ನು ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡುತ್ತಿರುತ್ತಾರೆ. ಇದೀಗ ಮಗಳ ಮುದ್ದಾದ ಲಾಲಿ ಹಾಡಿನ ವಿಡಿಯೋವೊಂದನ್ನು ಹಂಚಿಕೊಂಡಿದ್ದು,ಆ್ಯಕ್ಷನ್ ಪ್ರಿನ್ಸ್ ಪುತ್ರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.