ಬಿಜೆಪಿ ಸಂಸದ ಗೌತಮ್ ಗಂಭೀರ್ ಶನಿವಾರ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ವಿನಂತಿಸಿದ್ದು, ಮತ್ತೆ ಕ್ರಿಕೆಟ್ ನತ್ತ ಗಮನ ಹರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಬಿಜೆಪಿ ಸಂಸದ ಗೌತಮ್ ಗಂಭೀರ್ ಶನಿವಾರ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ವಿನಂತಿಸಿದ್ದು, ಮತ್ತೆ ಕ್ರಿಕೆಟ್ ನತ್ತ ಗಮನ ಹರಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಪೂರ್ವ ದೆಹಲಿಯ ಸಂಸದನಾಗಿ ಜನರ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಗಂಭೀರ್, “ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ, ಇದರಿಂದಾಗಿ ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ನಾನು ಗಮನಹರಿಸಬಹುದು. ನನಗೆ ಜನರ ಸೇವೆ ಮಾಡಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಗಿ ಧನ್ಯವಾದ ಸಲ್ಲಿಸುತ್ತೇನೆ. ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.