ನವದೆಹಲಿ: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಭಾರತ ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದಾರೆ. ಮುಂದಿನ 10 ದಿನಗಳಲ್ಲಿ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 29 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ಬಿಜೆಪಿ 195 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಪ್ರಧಾನಿ ಮೋದಿ ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಾದ ಬಳಿಕ ಅವರು ತಮಿಳುನಾಡಿನ ಕಲ್ಪಾಕ್ಕಂನಲ್ಲಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ಗೆ ಭೇಟಿ ನೀಡಲಿದ್ದಾರೆ. ಆದಿಲಾಬಾದ್ ಹಾಗೂ ಚೆನ್ನೈನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಚ್ 5 ರಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ ಪ್ರಧಾನಿ ಮೋದಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದಾದ ಬಳಿಕ ಒಡಿಶಾದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಅಧಿಕಾರಿಗಳ ಪ್ರಕಾರ, ಮೋದಿ ಪಶ್ಚಿಮ ಬಂಗಾಳಕ್ಕೆ ತೆರಳುವ ಮೊದಲು ಒಡಿಶಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಾರ್ಚ್ 6ರಂದು ಅವರು ಕೋಲ್ಕತ್ತಾದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಬರಾಸತ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಬಳಿಕ ಮೋದಿ ಬಿಹಾರಕ್ಕೆ ತೆರಳಿ ಬೆಟ್ಟಿಯಾದಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಇಟಾನಗರದಲ್ಲಿ ಹಲವು ಯೋಜನೆಗಳ ಉದ್ಘಾಟನೆ ಮಾರ್ಚ್ 7 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ಮೋದಿ ತೆರಳಲಿದ್ದಾರೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರ್ಚ್ 8 ರಂದು ದೆಹಲಿಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅಸ್ಸಾಂಗೆ ತೆರಳಲಿದ್ದಾರೆ.
ಮೋದಿ ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್ನಲ್ಲಿ ಸೆಲಾ ಸುರಂಗವನ್ನು ಉದ್ಘಾಟಿಸಲಿದ್ದಾರೆ. ನಂತರ ಇಟಾನಗರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ಇದಾದ ಬಳಿಕ ಅಸ್ಸಾಂನ ಜೋರ್ಹತ್ನಲ್ಲಿ ಅಹೋಮ್ ಸಾಮ್ರಾಜ್ಯದ ಮಹಾನ್ ಕಮಾಂಡರ್ ಲಚಿತ್ ಬೊರ್ಫುಕನ್ ಅವರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಇದಾದ ನಂತರ ಮಾರ್ಚ್ 10 ರಂದು ಉತ್ತರ ಪ್ರದೇಶದ ಅಜಂಗಢದಲ್ಲಿ ಮೋದಿ ವಿವಿಧ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ.
ದ್ವಾರಕಾ ಎಕ್ಸ್ಪ್ರೆಸ್ ವೇ ಮಾರ್ಚ್ 11 ರಂದು ದೆಹಲಿಯಲ್ಲಿ ನಮೋ ಡ್ರೋನ್ ದೀದಿ ಮತ್ತು ಲಖಪತಿ ದೀದಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ದ್ವಾರಕಾದಲ್ಲಿ ಎಕ್ಸ್ಪ್ರೆಸ್ವೇನ ಹರ್ಯಾಣ ವಿಭಾಗವನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಸಂಜೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಮಾರ್ಚ್ 12ರಂದು ಗುಜರಾತ್ನ ಸಬರಮತಿ ಮತ್ತು ರಾಜಸ್ಥಾನದ ಪೋಖ್ರಾನ್ಗೆ ಭೇಟಿ ನೀಡಲಿದ್ದಾರೆ.
ಮಾರ್ಚ್ 13ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್ ಮತ್ತು ಅಸ್ಸಾಂನ ಮೂರು ಪ್ರಮುಖ ಸೆಮಿಕಂಡಕ್ಟರ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.