ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ ಶುದ್ಧ ವಿಜ್ಞಾನ ನಿಕಾಯದ ಡೀನರಾದ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್. ಝಂಡೇಕರ್ ಅಧಿಕಾರವನ್ನು ಹಸ್ತಾಂತರ ಮಾಡಿದರು. ಪ್ರಭಾರ ಕುಲಪತಿಯಾಗಿದ್ದ ಡಾ.ಅನಂತ್ ಎಲ್. ಝಂಡೇಕರ್ ಅವಧಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಕುಲಪತಿಯಾಗಿ ಪ್ರೊ. ವಿಜಯಕುಮಾರ ಬಿ. ಮಲಶೆಟ್ಟಿ ಅವರು ಇಂದು ಅಧಿಕಾರ ಸ್ವೀಕರಿಸಿದರು.