ಹೊಸಪೇಟೆ (ವಿಜಯನಗರ) ಮಾ.6 : ಕೇಂದ್ರ ಪುರಸ್ಕೃತ ಸ್ವದೇಶ ದರ್ಶನ್ 2.0 ಯೋಜನೆಯಡಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಪ್ರವಾಸೋದ್ಯಮ ಮಂತ್ರಾಲಯ, ಭಾರತ ಸರ್ಕಾರ ಇವರ ಸಹಯೋಗದಲ್ಲಿ ಹಂಪಿಯ ವಿವಿಧ ಪರಿಸರದಲ್ಲಿ “ಡೆವೆಲಪ್ಮೆಂಟ್ ಆಫ್ ಟ್ರಾವೆಲ್ಲರ್ ನೂಕ್ಸ್” ಹಂಪಿ ಯೋಜನೆಯ ಶಂಕುಸ್ಥಾಪನೆಯ ವರ್ಚುವಲ್ ಲಾಂಚ್ ನೇರಪ್ರಸಾರ ಕಾರ್ಯಕ್ರಮವನ್ನು ಮಾರ್ಚ 7 ರಂದು ಬೆಳಿಗ್ಗೆ 10.30 ಗಂಟೆಗೆ ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನ ಎದುರುಗಡೆ ಹಮ್ಮಿಕೊಳ್ಳಾಗಿದೆ.
ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಭಾರತ ಸರ್ಕಾರ ವರ್ಚುವಲ್ ಲಾಂಚ್ ಮೂಲಕ ಶಂಕುಸ್ಥಾಪನೆ ನೆರವೇರಿಸುವರು. ವಸತಿ, ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಜೆಡ್. ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್. ಕೆ. ಪಾಟೀಲ್ ಅವರು ಗೌರವ ಉಪಸ್ಥಿತಿ ವಹಿಸುವರು. ಶಾಸಕರಾದ ಹೆಚ್. ಆರ್. ಗವಿಯಪ್ಪ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ, ವೈ. ದೇವೇಂದ್ರಪ್ಪ, ಜಿ. ಎಂ. ಸಿದ್ದೇಶ್ವರ, ಶಾಸಕರಾದ
ಕೆ. ನೇಮಿರಾಜ ನಾಯ್ಕ, ಕೃಷ್ಣ ನಾಯ್ಕ, ಬಿ. ದೇವೇಂದ್ರಪ್ಪ, ಎನ್. ಟಿ. ಶ್ರೀನಿವಾಸ, ಎಂ. ಪಿ ಲತಾ ಮಲ್ಲಿಕಾರ್ಜುನ, ಡಾ. ಚಂದ್ರಶೇಖರ ಬಿ. ಪಾಟೀಲ್, ವೈ. ಎಂ. ಸತೀಶ್, ಶಶೀಲ್ ಜಿ. ನಮೋಶಿ, ನಗರಸಭೆ ಅಧ್ಯಕ್ಷೆ
ರಜೀನಿ ಷಣ್ಮುಖ, ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್, ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಡಾ.ಶಮ್ಲಾ ಇಕ್ಬಾಲ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ರಾಮ್ ಪ್ರಸಾತ್ ಮನೋಹರ್ ಅವರು ಭಾಗಿಯಾಗುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಂ. ಎಸ್. ದಿವಾಕರ, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸದಾಶಿವ ಪ್ರಭು ಬಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ. ಎಲ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಪ್ರಭುಲಿಂಗ ಎಸ್. ತಳಿಕೇರಿ, ವಿಜಯನಗರ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಕೈಗಾರಿಕೋದ್ಯಮಿಗಳು, ಹೋಟೆಲ್ ಉದ್ಯಮಿಗಳು, ವ್ಯಾಪಾರಸ್ಥರು ಹಾಗೂ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಎಲ್ಲಾ ಪ್ರವಾಸಿ ಮಾರ್ಗದರ್ಶಿಗಳು ಹಾಗೂ ಎಲ್ಲಾ ಪ್ರವಾಸಿ ಸೇವಾದಾತರು, ಸ್ವದೇಶ ದರ್ಶನ್ ಸಮಾಲೋಚಕರು ಮತ್ತು ವಿಜಯನಗರ ಜಿಲ್ಲೆಯ ಸಮಸ್ತ ನಾಗರೀಕರು ಭಾಗಿಯಾಗಲಿದ್ದಾರೆ ಎಂದು ಕಮಲಾಪುರ ವಿಭಾಗದ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಪ್ರಭುಲಿಂಗ ಎಸ್. ತಳಿಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
*****