ಬಳ್ಳಾರಿ,ಮಾ.11 : ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ಇಂದು ಜಿಲ್ಲಾ ಖನಿಜ ಪ್ರತಿಷ್ಟಾನದ 2020-21 ನೇ ಸಾಲಿನ 6 ಕ್ರಿಯಾ ಯೋಜನೆಯಡಿ ನಿರ್ಮಿಸಲಾಗುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ (ಆರೋಗ್ಯ ಸೌಧ) ನೂತನ ಕಟ್ಟಡಕ್ಕೆ ಭೂಮಿಪೂಜೆ ನೇರವೆರಿಸಿದರು.
ಈ ವೇಳೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮಹಾನಗರ ಪಾಲಿಕೆ ಮೇಯರ್ ಬಿ.ಶ್ವೇತ, ಉಪಮೇಯರ್ ಬಿ.ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಲೋಕೊಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಹೇಮರಾಜ್ ಸೇರಿದಂತೆ ಪಾಲಿಕೆಯ ಸದಸ್ಯರು, ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.