ಬೆಂಗಳೂರು, ಮಾರ್ಚ್ 15 .- ಸರ್ಕಾರದ ವಿವಿಧ ಯೋಜನೆಗಳನ್ನು ರಾಜ್ಯದ ಜನತೆಗೆ ತಲುಪಿಸುವ ಜೊತೆಗೆ ನಮ್ಮ ಸರ್ಕಾರ ರಾಜ್ಯದ ಎಲ್ಲಾ ಶಾಲಾ -ಕಾಲೇಜುಗಳಲ್ಲಿ ಉತ್ತಮ ಶಿಕ್ಷಣ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊಟ & ವಸತಿಯ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಈ ಹಿಂದೆ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಇದ್ದ 12 ಏಕಲವ್ಯ ವಸತಿ ಶಾಲೆಗಳನ್ನು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗೆ ಪಡೆದಿದ್ದೇವೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ. ನಾಗೇಂದ್ರರವರು ತಿಳಿಸಿದರು.
ಬೆಂಗಳೂರು ನಗರದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕೇಂದ್ರ ಕಛೇರಿಯಲ್ಲಿ ಇಲಾಖೆಯ ಅಧಿಕಾರಿಗಳಿಂದ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಇಲಾಖೆಯನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಹಲವಾರು ವರ್ಷಗಳಿಂದ ವಾಲ್ಮೀಕಿ ಸಮುದಾಯದ ಬೇಡಿಕೆಯಾಗಿದ್ದ ಪ್ರತ್ಯೇಕ ಸಚಿವಾಲಯ ದ ಬೇಡಿಕೆಯನ್ನು ಈಡೇರಿಸಿ ತಾಳಸಮುದಾಯಗಳ ಅಭಿವೃದ್ಧಿ ಹರಿಕಾರರು ಎಂದು ಮತ್ತೊಮ್ಮೆ ಜನಪ್ರಿಯರಾಗಿದ್ದಾರೆ ಮತ್ತೆ ಇದೀಗ ನಮ್ಮ ಇಲಾಖೆಯ ಅಡಿಯಲ್ಲಿ ಬರುವ ಆದಿವಾಸಿ ಬುಡಕಟ್ಟು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ವಸತಿಶಾಲಾ ಶಿಕ್ಷಣ ಸಂಸ್ಥೆಗಳ ಸಂಘ ಸ್ಥಾಪನೆ ಮಾಡಲಾಗಿದ್ದು ಇದರಿಂದ ಕಾಡಂಚಿನ ಮಕ್ಕಳಿಗೆ ಆಶಾಕಿರಣವಾಗಿದೆ.
ಇನ್ನು ಪ್ರತ್ಯೇಕ ಸಚಿವಾಲಯ ಮುನ್ನೆಲೆಗೆ ತರಲು ನಮ್ಮ ಸರ್ಕಾರ ಹಾಗೂ ನಮ್ಮ ಸಮುದಾಯ ಸಚಿವರು ಶಾಸಕರು ಹಾಗೂ ಮಠಾಧೀಷರು ಸಾಥ್ ನೀಡಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯನ್ನು ಮುಖ್ಯವಾಹಿನಿಗೆ ತರುವಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು & ಸಿಬ್ಬಂದಿಗಳು ಸತತವಾಗಿ ಕಠಿಣ ಪರಿಶ್ರಮ ಕೂಡ ಬಹಳ ಮುಖ್ಯವಾಗಿದೆ
ರಾಜ್ಯದ ಎಲ್ಲಾ ಜಿಲ್ಲಾ & ಹಾಗೂ ತಾಲ್ಲೂಕು ಮಟ್ಟದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಉನ್ನತ ಮಟ್ಟದ ಶಿಕ್ಷಣ ಪಡೆಯಲು ಇಲಾಖೆ ವತಿಯಿಂದ ಶೈಕ್ಷಣಿಕ ಸಹಾಯ ಧನ ನೀಡಬೇಕು ಆದಿವಾಸಿ ಬುಡಕಟ್ಟು ಜನರು ಇರುವ ಪ್ರದೇಶದಲ್ಲಿ 1ರಿಂದ 10 ನೇ ತರಗತಿ ವರೆಗೆ ಶಿಕ್ಷಣ ನೀಡಲು ಸರ್ಕಾರದ ವತಿಯಿಂದ ಹಂತ ಹಂತವಾಗಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು
ಈ ಸಂಧರ್ಭದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕರಾದ ಬಿ.ಕಲ್ಲೇಶ್. ಜೆಡಿ ರಾಜಕುಮಾರ್, ಡಿಡಿ ಸುರೇಶ್ ರೆಡ್ಡಿ, ಎ.ಡಿ. ಶ್ರೀನಿವಾಸ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು