ಬಳ್ಳಾರಿ,ಮಾ.25 : ಜಿಲ್ಲೆಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿದೆ.
ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಮೊದಲನೇ ದಿನವಾದ ಸೋಮವಾರದಂದು ಕನ್ನಡ ಭಾಷಾ ಪರೀಕ್ಷೆ ದಿನದಂದು ಬಳ್ಳಾರಿ ತಾಲ್ಲೂಕಿನ ಮೋಕಾ ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಭೇಟಿ ನೀಡಿ ವೀಕ್ಷಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ವೇಳೆ ಶಿಕ್ಷಣಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ಇತರರು ಹಾಜರಿದ್ದರು.