ಬಳ್ಳಾರಿ,ಮಾ.25 : ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆಯು ಕಟ್ಟುನಿಟ್ಟಾಗಿ ಜಾರಿಯಾಗಿದ್ದು, ಭಾನುವಾರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಅನಧೀಕೃತವಾಗಿ ಸಾಗಿಸುತ್ತಿದ್ದ 658.58 ಲೀಟರ್ (ರೂ.2,57,990 ಮೌಲ್ಯ) ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 520.87 ಲೀಟರ್ (ರೂ.196960 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 137.71 ಲೀಟರ್ (ರೂ.61,030 ಮೌಲ್ಯ) ಮದ್ಯ ಮತ್ತು ಒಂದು ವಾಹನ (ರೂ.80 ಸಾವಿರ ಮೌಲ್ಯ) ವಶಪಡಿಸಿಕೊಳ್ಳಲಾಗಿದೆ. ಈವರೆಗೆ ಒಟ್ಟು 47 ಪ್ರಕರಣ ದಾಖಲಿಸಲಾಗಿದೆ.
ಜಿಲ್ಲೆಯಾದ್ಯಂತ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅವುಗಳು ಕಾರ್ಯಪ್ರವೃತ್ತವಾಗಿದೆ. 16 ಫ್ಲೈಯಿಂಗ್ ಸÁ್ಕ್ಯ್ವಡ್, 24 ಎಸ್ಎಸ್ಟಿ ತಂಡ ಮತ್ತು 7 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.