ಮುಂದಿನ ಎರಡು ತಿಂಗಳ ಕಾಲ ಈ ಎಂಟು ಜಿಲ್ಲೆಯಲ್ಲಿನ ಅಂಗನವಾಡಿಗಳು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ. ಬದಲಾದ ವೇಳಾಪಟ್ಟಿಯಂತೆ ಐಸಿಡಿಎಸ್ ಸೇವೆಗಳನ್ನು ನಿಯಮಾನುಸಾರ ಯಾವುದೇ ಅಡೆತಡೆಗಳಿಲ್ಲದೆ ಅಂಗನವಾಡಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್ ಅವರು ತಿಳಿಸಿದ್ದಾರೆ.
ಈ ಮೊದಲು ಅಂಗನವಾಡಿಗಳು ಮುಂಜಾನೆ 9.30 ರಿಂದ ಸಂಜೆ 4 ಗಂಟೆವರಗೆ ಕಾರ್ಯನಿರ್ವಹಿಸುತ್ತಿದ್ದವು. ಕೆಲ ಪಾಲಕರು ತಮ್ಮ ಮಕ್ಕಳನ್ನು ಮಧ್ಯಾಹ್ನ 1.30 ಕ್ಕೆ ಕರೆದುಕೊಂಡು ಹೋದರೆ, ಕೆಲ ಪಾಲಕರು ಸಂಜೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಕೊಪ್ಪಳ, ಬಳ್ಳಾರಿ, ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಹೆಚ್ಚಿನ ತಾಪಮಾನ ಇರೋದರಿಂದ ಮಕ್ಕಳು ಮಧ್ಯಾಹ್ನದ ಸಮಯದಲ್ಲಿ ಪರದಾಡುತ್ತಿದ್ದರು.
ಹೀಗಾಗಿ ಅಂಗನವಾಡಿಗಳ ಸಮಯವನ್ನು ಬೇಸಿಗೆ ಕಾಲದಲ್ಲಿ ಬದಲಾವಣೆ ಮಾಡಬೇಕು ಅಂತ ಅನೇಕ ಪಾಲಕರು ಮತ್ತು ಅಂಗನವಾಡಿ ಸಿಬ್ಬಂದಿ ಆಗ್ರಹಿಸಿದ್ದರು. ಹೀಗಾಗಿ ಸರ್ಕಾರ ತಾತ್ಕಾಲಿಕವಾಗಿ ಸಮಯವನ್ನು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.