ಬಳ್ಳಾರಿ,ಏ.16 : ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸಂಗನಕಲ್ಲು ಗ್ರಾಮದಲ್ಲಿ ಬಳ್ಳಾರಿ ಜಿಲ್ಲಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಇ.ತುಕಾರಾಂ ಅವರ ಪರವಾಗಿ ಮತಯಾಚನೆ ಮಾಡಲು ಆಗಮಿಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ, ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್ ಅವರ
ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಸಂಗನಕಲ್ಲು ಗ್ರಾಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರು, ಮಾಜಿ ಉಪಾಧ್ಯಕ್ಷರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಂಗನಕಲ್ಲು ಗ್ರಾಮ ಪಂಚಾಯಿತಿ ಸದಸ್ಯರಾದ ಪಂಪಾಪತಿ, ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರಾದ ಎರ್ರೆಮ್ಮ ಅಂಜಿನಪ್ಪ, ಬಿಜೆಪಿ ಪಕ್ಷಕ್ಕೆ ಮುಖಂಡರಾದ ಪಾಮಣ್ಣ, ದೊಡ್ಡ ಈರಣ್ಣ, ಸಣ್ಣ ಈರಣ್ಣ, ಅಂಜಿನಪ್ಪ, ಹುಲುಗಪ್ಪ, ರಾಜೇಶ್, ಮೋಹನ್, ರಮೇಶ್, ಲಕ್ಷ್ಮಿಕಾಂತ್, ವಿರುಪಾಕ್ಷಿ, ಶಿವರಾಜ್, ಕುಮಾರ್ ಸ್ವಾಮಿ, ಮಂಜುನಾಥ, ಪ್ರಶಾಂತ್ ಸೇರಿದಂತೆ ಮೂರನೇ ವಾರ್ಡಿನ ನೂರಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಮಾನಯ್ಯ, ಚರ್ಮ ಕೈಗಾರಿಕಾ ಅಧ್ಯಕ್ಷರಾದ ಮುಂಡ್ರಿಗಿ ನಾಗರಾಜ್, ಬಗರ್ ಹುಕುಮ್ ಅಧ್ಯಕ್ಷರಾದ ತಿಮ್ಮನಗೌಡ, ಗೋವರ್ಧನ ರೆಡ್ಡಿ, ಕಾಂಗ್ರೆಸ್ ಮುಖಂಡರಾದ ಯರ್ರಿಗುಡಿ ಮುದಿಮಲ್ಲಯ್ಯ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಸಂಗನಕಲ್ಲು ವಿಜಯಕುಮಾರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಬಿ.ದುರ್ಗಣ್ಣ, ಪುನೀತ್, ಜೋಗಿನ್ ಚಂದ್ರಪ್ಪ, ಕಾಂಗ್ರೆಸ್ ಯುವ ಮುಖಂಡ ವಿಜಯ್ ಕುಮಾರ್, ಪವನ್ ಮುಂತಾದವರು ಉಪಸ್ಥಿತರಿದ್ದರು.