ಕಾಂಕೇರಿ: ಲೋಕಸಭಾ ಚುನಾವಣೆಗೆ ಕೇವಲ ಇನ್ನೂ ಮೂರು ದಿನ ಬಾಕಿಯಿರುವಂತೆಯೇ ಛತ್ತೀಸ್ ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಭೇಟಿಯಾಡಿದ್ದಾರೆ. ಕಾಂಕೇರಿ ಜಿಲ್ಲೆಯಲ್ಲಿ ಮಂಗಳವಾರ ನಡೆದ ಗುಂಡಿನ ಕಾಳಗದಲ್ಲಿ ಕನಿಷ್ಠ 18 ಮಂದಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಎನ್ಕೌಂಟರ್ನಲ್ಲಿ ಕನಿಷ್ಠ ಎಂಟು ನಕ್ಸಲೀಯರನ್ನು ಹೊಡೆದುರುಳಿಸಲಾಗಿದೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಮೂವರು ಭದ್ರತಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.