ಹೊಸಪೇಟೆ, ಏ.18 : ನಗರದ ಸಾಯಿ ಲೀಲಾ ರಂಗ ಮಂದಿರದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಮಾತನಾಡಿ, ಮೂಡಣದಲ್ಲಿ ಸೂರ್ಯ-ಚಂದ್ರ ಹುಟ್ಟುವುದು ಎಷ್ಟು ಸತ್ಯವೋ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಂ ಅವರನ್ನು ಗೆಲ್ಲುವುದು ಅಷ್ಟೇ ಸತ್ಯ ಎಂದರು.
ರಾಜ್ಯದ 28 ಕ್ಷೇತ್ರಗಳ ಪೈಕಿ, ಬಳ್ಳಾರಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಗೆಲ್ಲುವುದು ಅಷ್ಟೆ ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ನ್ನು ಘೋಷಣೆ ಮಾಡಿದಾಗ ಬಿಜೆಪಿ, ಹಾಸ್ಯ ಮಾಡಿತ್ತು. ಈ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ರಾಜ್ಯವನ್ನು ಇಡೀ ದೇಶವೇ ತಿರಿಗಿ ನೋಡುವಂತಾಗಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಹೆಮ್ಮೆ ಸರ್ಕಾರವಾಗಿದೆ.
ಈ ಚುನಾವಣೆಯಲ್ಲಿ ಕೋಮವಾದಿ ಪಕ್ಷ ಬಿಜೆಪಿಯನ್ನು ಹೊರಗಿಡಬೇಕು. ರಾಜ್ಯದಲ್ಲಿ ಇನ್ನೂ ನಾಲ್ಕು ವರ್ಷ ಕಾಂಗ್ರೆಸ್ ಪಕ್ಷವೇ ಅಧಿಕಾರದಲ್ಲಿರಲಿದೆ. ಈಗ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಡಬಲ್ ಇಂಜಿನ್ ಸರ್ಕಾರ ಅಧಿಕಾರದಲ್ಲಿರಲ್ಲಿದೆ ಎಂದು ಸಚಿವ ಬಿ.ನಾಗೇಂದ್ರ ಅವರು ಹೇಳಿದರು.
ಧರ್ಮದ ಪರವಾಗಿ ಇರುವವರು ಪಾಂಡವರು, ಕಾಂಗ್ರೆಸ್ ಸದಾ ಧರ್ಮದ ಪರವಾಗಿ ಇರಲಿದೆ. ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಗಳ ಜನರು ಒಂದೇ ತಾಯಿ ಮಕ್ಕಳಂತೆ ಕೆಲಸ ಮಾಡಿ ಈ ಗೆಲುವು ತಂದು ಕೊಡಲಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಜಯ ನಮ್ಮದಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಕೆಲ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ವಿಜಯ ನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಅವರು, ಕಾಂಗ್ರೆಸ್ ಅಭ್ಯರ್ಥಿ ಇ ತುಕಾರಾಂ ಅವರು, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು, ಶಾಸಕ ಎಚ್.ಆರ್.ಗವಿಯಪ್ಪ ಅವರು, ಶಾಸಕರಾದ ಎನ್.ಟಿ.ಶ್ರೀನಿವಾಸ್ ಅವರು, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಅವರು, ಕಾಂಗ್ರೆಸ್ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಣಿ ಸಂಯುಕ್ತ ಅವರು, ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಅವರು, ಕೆ.ಎಲ್.ಎಸ್. ಸ್ವಾಮಿ ಅವರು, ವಿಜಯನಗರ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸಿರಾಜ್ ಶೇಖ್ ಅವರು, ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ ಅವರು, ಕಾಂಗ್ರೆಸ್ ಪಕ್ಷದ ಮುಖಂಡರಾದ ವಿನಾಯಕ್ ಶೆಟ್ಟರ್, ಕುರಿ ಶಿವಮೂರ್ತಿ, ಎನ್ ರಾಮಕೃಷ್ಣ, ಡಿ.ವೆಂಕಟ ರಮಣ, ಬಿ.ಮಾರೆಣ್ಣ, ದೊಡ್ಡ ರಾಮಣ್ಣ, ಸೈಯದ್ ಮೊಹಮದ್, ಅನ್ವರ್ ಭಾಷಾ ಹಾಗೂ ಸಂಗೀತಾ ಸಿಂಗ್ ಇತರರಿದ್ದರು.