ಗಾಂಧಿನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ(ಬಿಜೆಪಿ)ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.
‘ವಿಜಯ್ ಮುಹೂರ್ತ’ ಎಂದು ಪರಿಗಣಿಸಲಾದ ಇಂದು ಮಧ್ಯಾಹ್ನ 12.39ಕ್ಕೆ ಗಾಂಧಿನಗರ ಕಲೆಕ್ಟರ್ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಅಮಿತ್ ಶಾ ನಾಮಪತ್ರ ಸಲ್ಲಿಸಿದರು. ಅಮಿತ್ ಶಾ ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇದ್ದರು.
ಬಿಜೆಪಿ ಮಾಜಿ ಅಧ್ಯಕ್ಷ ಅಮಿತ್ ಶಾ ಅವರು ಕಳೆದ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಗಾಂಧಿನಗರ ಕ್ಷೇತ್ರದಿಂದ 5 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಗುಜರಾತ್ನ ಎಲ್ಲಾ 26 ಲೋಕಸಭಾ ಸ್ಥಾನಗಳಿಗೆ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.