ಬಳ್ಳಾರಿ,ಏ.19 : 09-ಬಳ್ಳಾರಿ (ಪ.ಪಂ) ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರದಂದು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಪಿಜೆಪಿ (ಪ್ರಹಾರ ಜನಶಕ್ತಿ ಪಾರ್ಟಿ) ಪಕ್ಷದ ಅಭ್ಯರ್ಥಿ ಮಂಜುನಾಥ್ ಗೋಸಾಲ್ ಅವರು 2 ಸೆಟ್ ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ವಿರೇಶ್ ಮತ್ತು ನವಭಾರತ ಸೇನಾ ಪಕ್ಷದ ಅಭ್ಯರ್ಥಿಯಾಗಿ ಜಿ.ಸ್ವಾಮಿ ಅವರು ಒಂದೊಂದು ನಾಮಪತ್ರ ಸೇರಿದಂತೆ ಒಟ್ಟು ಮೂವರು ಅಭ್ಯರ್ಥಿಗಳಿಂದ 4 ನಾಮಪತ್ರ ಸಲ್ಲಿಕೆಯಾಗಿವೆ.
ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ಏ.12 ರಂದು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಏ.15 ರಂದು ಓರ್ವ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಏ.16 ರಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ. ಏ.17 ರಂದು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಏ.18 ರಂದು ಒಂದು ನಾಮಪತ್ರ ಮತ್ತು ಏ.19 ರಂದು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇದುವರೆಗೆ ಒಟ್ಟು 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.
ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22 ರಂದು ನಾಮಪತ್ರ ವಾಪಸ್ಸು ಪಡೆಯಲು ಕೊನೆಯ ದಿನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.