ಬೆಂಗಳೂರು: ರೈಲಿಗೆ ಸಿಲುಕಿ 25 ವರ್ಷದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಮೂವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದು, ಇವರನ್ನು ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂಲದವರು ಎಂದು ಶಂಕಿಸಲಾಗಿದೆ.
ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ತಿಳಿದು ಬಂದಿದೆ. ಶಶಿಕುಮಾರ್ (23), ಲೋಕೇಶ್ (25) ಮೃತ ದುರ್ದೈವಿಗಳು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ಇನ್ನೂ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ ಅಷ್ಟೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.