ಬಳ್ಳಾರಿ, ಏ.29 : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಸಿಂಧುವಾಳ, ಎಂ.ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಮತ್ತು ಡಿ.ನಾಗೇನಹಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಈ.ತುಕಾರಾಂ ಪರವಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಮತ ಪ್ರಚಾರ ನಡೆಸಿದರು.
ನಂತರ ಮಾತನಾಡಿ ಸಚಿವ ಬಿ.ನಾಗೇಂದ್ರ ಅವರು ಈ ಬಾರಿಯ ಲೋಕಸಭಾ ಚುನಾವಣಾ ಅಭ್ಯರ್ಥಿ ಯನ್ನಾಗಿ ಸೋಲಿಲ್ಲದ ಸರದಾರ, ನಾಲ್ಕು ಬಾರಿ ಶಾಸಕರಾಗಿ ಹಲವಾರು ಹುದ್ದೆ ಅಲಂಕರಿಸಿರುವ ಯಾವುದೆ ಕಳಂಕವಿಲ್ಲದಂತಹ ಸಂಸತ್ತಿನಲ್ಲಿ ಬಳ್ಳಾರಿ ಜಿಲ್ಲೆ ಜನರ ಪರ ಧ್ವನಿಯಾಗುವ ಈ.ತುಕಾರಾಂ ಅವರನ್ನ ಹೆಚ್ಚಿನ ಬಹುಮತಗಳಿಂದ ಗೆಲ್ಲಿಸಬೇಕು ನನ್ನ ಚುನಾವಣೆಯಲ್ಲಿ ಮತದಾನ ಮಾಡಿದಂತೆ ಈ ಚುನಾವಣೆಯಲ್ಲೂ ಉತ್ಸಾಹದಿಂದ ತುಕಾರಾಂ ಅವರಿಗೆ ಮತ ಚೆಲಾಯಿಸುವಂತೆ ಮನವಿ ಮಾಡಿದರು.
ರಾಜ್ಯ ಸರ್ಕಾರ ನೀಡಿರುವ ಪಂಚ ಗ್ಯಾರೆಂಟಿಗಳನ್ನು ಮೆಚ್ಚಿಕೊಂಡಿರುವ ರಾಜ್ಯದ ಜನತೆ ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಆಶೀರ್ವಾದ ಮಾಡಲಿದೆ ಎಂದು ಹೇಳಿದ ನಾಗೇಂದ್ರ ಅವರು, ಈ ಬಾರಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ವರ್ಷಕ್ಕೆ ಒಂದು ಕುಟುಂಬಕ್ಕೆ ಒಂದು ಲಕ್ಷ ಗ್ಯಾರೆಂಟಿ ಯೋಜನೆಯ ಹಣ ದೊರೆಯಲಿದೆ ಅದ್ದರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ತುಕಾರಾಂ ಅವರನ್ನ ಹೆಚ್ಚಿನ ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಪಕ್ಷ ಕಡೆವರೆಗೂ ನಿಮ್ಮ ಜೊತೆ ನಿಮ್ಮ ಕಷ್ಟ, ಸುಖಗಳಲ್ಲಿ ಭಾಗಿಯಾಗಿ ನಿಮ್ಮೊಟ್ಟಿಗೆ ಇರುವುದಾಗಿ ಸಚಿವ ಬಿ.ನಾಗೇಂದ್ರ ಅವರು ತಿಳಿಸಿದರು.
ಈ ಪ್ರಚಾರ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಲ್ಲಂ ಪ್ರಶಾಂತ್, ಕಾಂಗ್ರೆಸ್ ಮುಖಂಡರಾದ ವೆಂಕಟೇಶ್ ಪ್ರಸಾದ್, ಅಣ್ಣಾ ನಾಗರಾಜ್, ಗೋವರ್ಧನ್ ರೆಡ್ಡಿ, ಬಗರ್ ಹುಕುಂ ಕಮೀಟಿ ಅಧ್ಯಕ್ಷರಾದ ಹೆಚ್.ತಿಮ್ಮನಗೌಡ, ಬೆಣಕಲ್ಲು ಬಸವರಾಜ ಗೌಡ, ಯರ್ರಗುಡಿ ಮುದಿಮಲ್ಲಯ್ಯ, ಶ್ರೀನಾಥ್ ಸೇರಿದಂತೆ ಗ್ರಾಮಗಳ ಪ್ರಮುಖ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.