ಹೊಸಪೇಟೆ (ವಿಜಯನಗರ) ಜೂನ್ 25 : ಜೂನ್ ಮತ್ತು ಜುಲೈ ಮಾಹೆಯಲ್ಲಿ ನಿಗದಿಯಾದ ಜನತಾ ದರ್ಶನದ ಮೊದಲ ಕಾರ್ಯಕ್ರಮ ಹೂವಿನಹಡಗಲಿಯಲ್ಲಿ ಜೂನ್ 25ರಂದು ನಡೆಯಿತು.
ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದ ಸಮಾರಂಭದಲ್ಲಿ, ಶಾಸಕರಾದ ಕೃಷ್ಣ ನಾಯ್ಕ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಸಾರ್ವಜನಿಕರ ಅಹವಾಲು ಆಲಿಸಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ನಿAದ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಸಹಾಯಕ ಆಯುಕ್ತರಾದ ಚಿದಾನಂದ ಗುರುಸ್ವಾಮಿ, ತಹಸೀಲ್ದಾರರಾದ ಅಮರೇಶ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಉಮೇಶ ಅವರು ಜಿಲ್ಲಾಧಿಕಾರಿಗಳ ಜೊತೆಗೆ ಅರ್ಜಿಗಳನ್ನು ಪರಿಶೀಲಿಸಿದರು.
ಅಬಕಾರಿ ಉಪ ಆಯುಕ್ತರಾದ ಸಿ.ಕೆ.ಮಹೇಂದ್ರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ಎಸ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಮಚಂದ್ರಪ್ಪ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ವೇತಾ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಸೋಮಸಿಂಗ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗುಡ್ಡಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದು ಜಿಲ್ಲಾಧಿಕಾರಿಗಳ ಸೂಚನೆಯಂತೆ ಅರ್ಜಿಗಳ ಬಗ್ಗೆ ಸ್ಥಳದಲ್ಲಿಯೇ ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
101 ಅರ್ಜಿಗಳ ಸಲ್ಲಿಕೆ: ಕಂದಾಯ ಇಲಾಖೆಗೆ 58, ತಾಲೂಕು ಪಂಚಾಯತ್ಗೆ 9, ಪುರಸಭೆsಗೆ 7, ಭೂಮಾಪನ ಇಲಾಖೆಗೆ 4, ಸಾರಿಗೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜೆಸ್ಕಾಂ ಇಲಾಖೆಗೆ ಮತ್ತು ಸಣ್ಣ ನೀರಾವರಿ ಇಲಾಖೆಗೆ ತಲಾ 3., ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ 2, ಲೋಕೋಪಯೋಗಿ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ, ಕೃಷಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆಗೆ ತಲಾ 1 ಅರ್ಜಿಗಳು ಸಲ್ಲಿಕೆಯಾದವು.
ಅರ್ಜಿ ಸ್ವೀಕೃತಿಗೆ ವ್ಯವಸ್ಥೆ: ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಜನತಾ ದರ್ಶನದಲ್ಲಿ ಸ್ವೀಕೃತಿಯಾಗುವ ಅರ್ಜಿಗಳ ಸ್ವೀಕೃತಿಗೆ ಎಲ್ಲಾ ಇಲಾಖೆಗಳಿಂದಲು ವ್ಯವಸ್ಥೆಯನ್ನು ಮಾಡಲಾಗಿತ್ತು ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಆರೋಗ್ಯ ಇಲಾಖೆ, ತೋಟಗಾರಿಕಾ ಇಲಾಖೆ, ಕೃಷಿ ವಿವಿ ರಾಯಚೂರಿನ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಡಗಲಿ, ಜೆಸ್ಕಾಂ ಉಪ ವಿಭಾಗ, ಪಂಚಾಯತ್ ರಾಜ್ಯ ಎಂಜಿನಿಯರಿAಗ್ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಪಂಚಾಯತ್, ಸಿಡಿಪಿಓ ಕಚೇರಿ, ಮೀನುಗಾರಿಕೆ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆ, ಪುರಸಭೆ ಕಾರ್ಯಾಲಯ, ಸಾರಿಗೆ ಇಲಾಖೆ, ಅಬಕಾರಿ ಇಲಾಖೆ, ಪಶುಪಾಲನಾ ಇಲಾಖೆ, ಸರ್ವೆ ಇಲಾಖೆ, ಕೆಆರ್ಐಡಿಎಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದು ಕಾರ್ಯಕ್ರಮದ ಸ್ಥಳದಲ್ಲಿ ಟೇಬಲ್ ಅಳವಡಿಸಿ ಸಾಲಾಗಿ ಕುಳಿತು ಅರ್ಜಿ ಸ್ವೀಕರಿಸಿದರು.
ಯೋಜನೆಗಳ ಮಾಹಿತಿ: ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಪಶುಪಾಲನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ಅರ್ಜಿ ಸ್ವೀಕರಿಸುವುದರ ಜೊತೆಗೆ ತಮ್ಮ ತಮ್ಮ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿಯನ್ನು ಪ್ರದರ್ಶಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ವಿವಿಧೆಡೆ ಭೇಟಿ: ಜನಸ್ಪಂದನ ಕಾರ್ಯಕ್ರಮಕ್ಕಾಗಿ ಹೂವಿನಹಡಗಲಿಗೆ ಭೇಟಿ ನೀಡಿದ್ದ ವೇಳೆಯಲ್ಲಿ ಜಿಲ್ಲಾಧಿಕಾರಿಗಳು, ಹಡಗಲಿ ತಾಲೂಕಿನ ಮೀರಾಕೋರನಹಳ್ಳಿ ಗ್ರಾಮದ ಶರಣಬಸವೇಶ್ವರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಕಂಪ್ಯೂಟರ್ ಲ್ಯಾಬ್ ಶಾಲೆ ಇತರೆ ಶಾಲಾ ಉನ್ನೀತೀಕರಣದ ಕಾಮಗಾರಿ ಪರಿಶೀಲಿಸಿದರು.
ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಭೇಟಿ: ಜಿಲ್ಲಾಧಿಕಾರಿಗಳು, ಹೂವಿನಹಡಗಲಿ ಪಟ್ಟಣದಲ್ಲಿನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಹ ಭೇಟಿ ನೀಡಿ ಘಟಕದ ಬಗ್ಗೆ ಮಾಹಿತಿ ಪಡೆದು ಪ್ರಶಂಸೆ ವ್ಯಕ್ತಪಡಿಸಿದರು. ಹಡಗಲಿ ಪುರಸಭೆಯಿಂದ ಪಟ್ಟಣದಲ್ಲಿ ಹಸಿ ಮತ್ತು ಒಣ ತ್ಯಾಜ್ಯ ಸಂಗ್ರಹಿಸಿ ಬೇರ್ಪಡಿಸಿ ವೈಜ್ಞಾನಿಕ ರೀತಿಯಲ್ಲಿ ಘನತ್ಯಾಜ್ಯ ಘಟಕವನ್ನು ನಿರ್ವಹಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಹೂವಿನಹಡಗಲಿಯ ಗ್ರೇಡ್ 1 ತಹಸೀಲ್ದಾರರಾದ ಮಲ್ಲಿಕಾರ್ಜುನ, ಪುರಸಭೆ ಮುಖ್ಯಾಧಿಕಾರಿ ಪಚ್ಚಿ ಮಲ್ಲೇಶ, ಸಿಡಿಪಿಓ ರಾಮನಗೌಡ್ರ, ಹೂವಿನಹಡಗಲಿ ಪಿಎಸ್ಐಗಳಾದ ವಾಸು ಬಿ.ಎಸ್, ವಿಜಯಕೃಷ್ಣ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.