ಬಳ್ಳಾರಿ,ಜು.06 : ಭಾರತದ ಮಾಜಿ ಉಪ ಪ್ರಧಾನ ಮಂತ್ರಿ, ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ 38ನೇ ಪರಿನಿರ್ವಾಹಣ ದಿನೋತ್ಸವ ಕಾರ್ಯಕ್ರಮವನ್ನು ನಗರದ ಜಿಲ್ಲಾ ಮೈದಾನ ಎದುರುಗಡೆಯ ನಲ್ಲಚೆರುವು ಪ್ರದೇಶದ ಡಾ.ಬಾಬು ಜಗಜೀವನ ರಾಂ ಭವನ ಆವರಣದಲ್ಲಿ ಶನಿವಾರ ಆಚರಿಸಲಾಯಿತು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಪುಷ್ಪ ನಮನ ಸಲ್ಲಿಸಿದರು.
ಈ ವೇಳೆ ಡಾ.ಬಾಬು ಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಿಗಿ ನಾಗರಾಜ, ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ, ಸಹಾಯಕ ನಿರ್ದೇಶಕಿ ಮಮತಾ ಸೇರಿದಂತೆ ವಿವಿಧ ದಲಿತ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಮತ್ತು ದಲಿತ ಸಂಘದ ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.