ಬಳ್ಳಾರಿ: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಸಂಯುಕ್ತ ಕರ್ನಾಟಕ ಪತ್ರಿಕೆಯ ಜಿಲ್ಲಾ ವರದಿಗಾರ ವೀರನಗೌಡ ಪಾಟೀಲ್ ಹಾಗೂ ಪಬ್ಲಿಕ್ ಟಿವಿಯ ವರದಿಗಾರ ನವೀನ್ ರವರು ಬೇರೆ ಜಿಲ್ಲೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬಳ್ಳಾರಿ ಜಿಲ್ಲಾ ಘಟಕದಿಂದ ಇಂದು ಮದ್ಯಾಹ್ನ ಪತ್ರಿಕಾ ಭವನದಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾನಿಪದಿಂದ ಇಬ್ಬರು ಪತ್ರಕರ್ತರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು ಪತ್ರಕರ್ತ ಸ್ನೇಹಿತರು ಉಪಸ್ಥಿತರಿದ್ದರು.