ಬಳ್ಳಾರಿ,ಜು.23 : ನಗರ ಜೆಸ್ಕಾಂನ 11 ಕೆವಿ ಫೀಡರ್ ವ್ಯಾಪ್ತಿಯಲ್ಲಿ ಹಾನಿಯಾಗಿರುವ ಕೆಲವೆಡೆ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಜು.24 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು*
ಎಫ್-7 ಫೀಡರ್ನ ಸಂಗನಕಲ್ಲುರಸ್ತೆ, ಎಸ್.ಎನ್.ಪೇಟ್ 3ನೇ ಕ್ರಾಸ್, ಜಿಲ್ಲಾಸ್ಪತ್ರೆ, ರಾಘವ ಕಲಾ ಮಂದಿರ, ಅನಂತಪುರರಸ್ತೆ, ವಡ್ಡರ ಬಂಡ್ಡೆ, ಅಗಡಿ ಮಾರೆಪ್ಪ ಕಾಂಪೌಂಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ. ರಸ್ತೆ, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ, ನರಪ್ಪ ಬೀದಿ, ತಾಯಮ್ಮ ಕಟ್ಟೆ ಸೇರಿದಂತೆ ಇನ್ನೂ ಮುಂತಾದ ಕಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.