ಬೆಂಗಳೂರು: ಹೃದಯ ಚಿಕಿತ್ಸೆಗೊಳಗಾದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಕುಮಾರ ರೇಷ್ಮೆ ಅವರಿಗೆ ನೆರವು ನೀಡುವಂತೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 75000/- ರೂಗಳ ಆರ್ಥಿಕ ನೆರವು ದೊರಕಿದೆ. ಅಕೌಂಟ್ ಗೆ ಹಣ ಜಮೆಯಾಗಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ.
ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಸಲ್ಲಿಸಿದ ಕೋರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ಮಂಜೂರು ಮಾಡಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಸಹಕಾರ ನೀಡಿದ್ದರು.
ಹೃದಯ ಚಿಕಿತ್ಸೆಗಾಗಿ ಸುಮಾರು 2 ಲಕ್ಷಕ್ಕೂ ಹೆಚ್ಚು ವೆಚ್ಚ ಮಾಡಿದ್ದು ಪತ್ರಕರ್ತ ಸಂಕಷ್ಟದಲ್ಲಿರುವ ಬಗ್ಗೆ ಸಂಘದ ಉಪಾಧ್ಯಕ್ಷ ಪುಂಡಲೀಕ ಬಾಳೋಜಿ ಅವರು ರಾಜ್ಯ ಸಂಘದ ಗಮನಕ್ಕೆ ತಂದಿದ್ದರು.
ಪರಿಹಾರ ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ ಅವರಿಗೆ, ಪರಿಹಾರ ದೊರಕಿಸಲು ಕ್ರಮ ವಹಿಸಿದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಕೃತಜ್ಞತೆ ಸಲ್ಲಿಸಿದೆ.