ಬಳ್ಳಾರಿ,ಆಗಸ್ಟ್.7: ಮಹಿಳೆಯರ ಬದುಕನ್ನು ಬೆಳಗಿಸುವ ವಿಶೇಷ ಯೋಜನೆಯೇ ಜ್ಞಾನ ವಿಕಾಸ ಕಾರ್ಯಕ್ರಮ’ ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರು ರೋಹಿತಾಕ್ಷ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು
ಬಳ್ಳಾರಿ ಗಾಂಧಿನಗರ ವಲಯದ ಹವOಬಾವಿ ಕಾರ್ಯಕ್ಷೇತ್ರದ ಶ್ರೀ ದುರ್ಗಾ ದೇವಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಮತ್ತು ಸದಸ್ಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿಲಾಗಿತ್ತು, ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ಪೂಜ್ಯ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಮಾತ್ರ ಎಂದು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಬಿಜೆಪಿ ಪಕ್ಷದ ಮುಖಂಡರು ಬಿ.ಕೆ.ನಾಗರಾಜ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಜಿಲ್ಲಾ ನಿರ್ದೇಶಕರು ರೋಹಿತಾಕ್ಷ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಬಗ್ಗೆ ಮತ್ತು ಯೋಜನೆಯ ಮೂಲ ಉದ್ದೇಶ ಮತ್ತು ಕ್ಷೇತ್ರದ ಹಿನ್ನೆಲೆಯ ಬಗ್ಗೆ ಸ್ವ ಸಹಾಯ ಸಂಘದ ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಸಬಲೀಕರಣರಾಗಬೇಕು ಮತ್ತು ಕುಟುಂಬದ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿಜಯಶಾಲಿ ಯಾದವರಿಗೆ ಬಹುಮಾನ ವಿತರಣೆ ಮಾಡಿದರು..
ಕಾರ್ಯಕ್ರಮದಲ್ಲಿ ಬಳ್ಳಾರಿ-1 ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳು ವೆಂಕಟೇಶ ಪಟಗಾರ್,
ಗಾಂಧಿನಗರ ವಲಯದ ಮೇಲ್ವಿಚಾರಕರು ತಿಮ್ಮಪ್ಪ, ಶ್ರೀ ಎರ್ರಿಸ್ವಾಮಿ ದಾಸೋಹ ಸಮಿತಿ ಸದಸ್ಯರು Y.S ಎರ್ರಿಣ್ಣ, ತಾಲೂಕಿನ ಜ್ಞಾನವಿಕಾಸ ಸಮನ್ವಯ ಅಧಿಕಾರಿಗಳು ಆಶಾ,ಗೌಸೀಯಾ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿಗಳು ,ಒಕ್ಕೂಟದ ಪದಾಧಿಕಾರಿಗಳು, ಸ್ವ ಸಹಾಯ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.