ಬಳ್ಳಾರಿ,ಆ.12 : ಜಿಲ್ಲಾಡಳಿತದಿಂದ 78 ನೇ ಸ್ವಾತಂತ್ರೋತ್ಸವದ ದಿನಾಚರಣೆ ಕಾರ್ಯಕ್ರಮವನ್ನು ಆ.15 ರಂದು ಬೆಳಿಗ್ಗೆ 09 ಗಂಟೆಗೆ ನಗರದ ವಿಮ್ಸ್ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಧ್ವಜಾರೋಹಣಾ ನೆರವೇರಿಸಿ ಪಥಸಂಚಲನ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರೊö್ಯÃತ್ಸವದ ಸಂದೇಶ ನೀಡುವರು.
ಇದಕ್ಕೂ ಮುನ್ನ ಸಚಿವರು, ಅಂದು ಬೆಳಿಗ್ಗೆ 08 ಕ್ಕೆ ಡಾ.ರಾಜ್ಕುಮಾರ್ ಉದ್ಯಾನವನದಲ್ಲಿನ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡುವರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಷಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜಡ್.ಜಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತಿ ಇರುವರು.
ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ನಾರಾ ಭರತ್ ರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ. ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರರ ಗಣ್ಯರು ಪಾಲ್ಗೊಳ್ಳುವರು.
ಅಂದು ಬೆಳಿಗ್ಗೆ 10 ರಿಂದ ವಿಮ್ಸ್ ಮೈದಾನದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಂಜೆ 06 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇನ್ನೀತರರು ಉಪಸ್ಥಿತರಿರುವರು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.