ಬಳ್ಳಾರಿ,ಆ.12 : ನಗರ ಶಿಶು ಅಭಿವೃದ್ದಿ ಯೋಜನೆಯಡಿ ನಗರದ ವಿವಿಧ ವಾರ್ಡ್ಗಳಲ್ಲಿ ಖಾಲಿ ಇರುವ 64 ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರಾಜ ಅವರು ತಿಳಿಸಿದ್ದಾರೆ.
ಗೌರವಧನ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು, ಆಸಕ್ತ ಅರ್ಹ ಮಹಿಳೆಯರು ಸೆ.10 ರೊಳಗಾಗಿ https://karnemakaone.kar.nic.in/abcd/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.08392-268609 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.