ಬಳ್ಳಾರಿ,ಆ.22 : ತಾಲೂಕು ಪಂಚಾಯಿತಿಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಯಿಯ ಹೆಸರಲ್ಲಿ ಒಂದು ವೃಕ್ಷ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ, ಅದಕ್ಕಾಗಿ ಪ್ರತಿಯೊಬ್ಬರೂ ತಾಯಿಯ ಹೆಸರಿನಲ್ಲಿ ಒಂದು ಸಸಿಗಳನ್ನು ನೆಡುವ ಸಂಕಲ್ಪ ಮಾಡಬೇಕು ಎಂದು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಮಡಗಿನ ಬಸಪ್ಪ ಅವರು ಹೇಳಿದರು. ನಮ್ಮ ದೇಶದ ಪ್ರಧಾನ ಮಂತ್ರಿ ಅವರು ಪ್ರತಿಯೊಬ್ಬರೂ ಪರಿಸರವನ್ನು ಬೆಳೆಸಿ, ಸಂರಕ್ಷಣೆ ಮಾಡುವ ಉದ್ದೇಶದಿಂದ ಪರಿಸರ ದಿನದ ಅಂಗವಾಗಿ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ನೆಡುವ ಕಾರ್ಯಕ್ರವನ್ನು ದೇಶದೆಲ್ಲೆಡೆ ಹಮ್ಮಿಕೊಳ್ಳಲಾಗಿದೆ. ಬರೀ ಕಾರ್ಯಕ್ರಮಗಳ ಮಾಡಿ ಸಸಿಗಳನ್ನ ನೆಟ್ಟರೆ ಸಾಲದು ಅವುಗಳನ್ನು ಪೋಷಿಸಿ ಬೆಳಿಸಿ ದೊಡ್ಡ ಮರಗಳನ್ನಾಗಿ ಮಾಡಬೇಕು. ನಾವೆಲ್ಲರೂ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವದ ಸಂಕೇತವಾಗಿ ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದರು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು ( ಗ್ರಾ ಉ) ಬಸವನಗೌಡ, ಬಚ್ಚಳಪ್ಪ, ರಮೇಶ್, ಮಹಾಂತೇಶ್, ಅನ್ನಪೂರ್ಣ ಜೊತೆಗೆ ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.